ದೋವಲ್,ಗೃಹಕಾರ್ಯದರ್ಶಿ ಜತೆ ಸಭೆ ನಡೆಸಿದ ಅಮಿತ್ ಶಾ
Team Udayavani, Aug 4, 2019, 7:30 PM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಪ್ರಸಕ್ತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರ ಸಭೆ ನಡೆಸಿದರು. ಸಂಸತ್ತಿನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿದ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಅವರೊಂದಿಗೆ ಈ ಸಭೆ ನಡೆಯಿತು.
ಪಾಕಿಸ್ಥಾನ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರನ್ನು ಗಡಿಯೊಳಕ್ಕೆ ನುಗ್ಗಿಸಲು ಯುತ್ನಿಸುತ್ತಿರುವುದು, ಕಾಶ್ಮೀರದಲ್ಲಿ ಕೈಗೊಂಡ ಭದ್ರತೆ ಇತ್ಯಾದಿ ವಿಚಾರಗಳ ಚರ್ಚೆಗೆ ಬಂದಿವೆ ಎನ್ನಲಾಗಿದೆ. ಸಭೆಯ ಕುರಿತ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಇನ್ನು ಸಂಸತ್ತಿನ ಕಲಾಪಕ್ಕೆ ಸಂಪೂರ್ಣ ತೆರೆಬಿದ್ದ ಬಳಿಕ ಮುಂದಿನ ಎರಡು ದಿನಗಳಲ್ಲಿ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಖುದ್ದು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇದೇ ವೇಳೆ ಅತ್ತ ಕಾಶ್ಮೀರದಲ್ಲಿ ಕೇಂದ್ರ ತ್ವರಿತ ಪ್ರಹಾರ ದಳವನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಸೋಮವಾರ ಬೆಳಗ್ಗೆ 9.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಕೇಂದ್ರ ಸಂಪುಟ ಸಭೆ ಆಯೋಜಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.