6 ದಿನ ಪೊಲೀಸರ ವಶಕ್ಕೆ ಹನಿಪ್ರೀತ್
Team Udayavani, Oct 5, 2017, 6:15 AM IST
ನವದೆಹಲಿ: ಮಂಗಳವಾರವಷ್ಟೇ ಪೊಲೀಸರಿಗೆ ಸೆರೆಸಿಕ್ಕ ಗುರ್ಮೀತ್ ಸಿಂಗ್ ದತ್ತುಪುತ್ರಿ ಹನಿಪ್ರೀತ್ ಇನ್ಸಾನ್ ಮತ್ತು ಆಕೆಯ ಸಹಾಯಕಿ ಜಗದೀಪ್ ಕೌರ್ರನ್ನು 6 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ಪಂಚಕುಲದ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.
ಪಂಚಕುಲದಲ್ಲಿ ಹಿಂಸೆಗೆ ಪ್ರಚೋದನೆ ನೀಡಿದ ಮತ್ತು ದೇಶದ್ರೋಹದ ಆರೋಪ ಹೊತ್ತಿರುವ ಹನಿಪ್ರೀತ್ಳನ್ನು ಪೊಲೀಸರು ಬುಧವಾರ ಪಂಚ ಕುಲ ಕೋರ್ಟ್ ಮುಂದೆ ಹಾಜರುಪಡಿಸಿದರು. ಈ ನಡುವೆ ಹನಿಪ್ರೀತ್ ತಾನು ಎದೆ ನೋವಿನಿಂದ ಬಳಲುತ್ತಿರುವುದಾಗಿ ಹೇಳಿದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ಆಕೆಗೆ ಯಾವ ತೊಂದರೆಯೂ ಇಲ್ಲ ಎಂದರು. ಇನ್ನೊಂದೆಡೆ, ಗುರ್ಮೀತ್ಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಕೋರಿ ಅತ್ಯಾಚಾರ ಸಂತ್ರಸ್ತೆಯರಿಬ್ಬರು ಬುಧವಾರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.