ಹೂಡಾ, ವೋರಾ ವಿರುದ್ಧವೂ ಆರೋಪ ಪಟ್ಟಿ
Team Udayavani, Dec 2, 2018, 6:00 AM IST
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮವಾಗಿ ಭೂಮಿಯನ್ನು ಮಂಜೂರು ಮಾಡಿದ ಆರೋಪದಲ್ಲಿ ಹರ್ಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮೋತಿಲಾಲ್ ವೋರಾ ವಿರುದ್ಧವೂ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ವಿಶೇಷ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಹರ್ಯಾದ ಪಂಚಕುಲಾ ವಿಭಾಗ 6 ರಲ್ಲಿ ಸಾಂಸ್ಥಿಕ ಭೂಮಿಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಮಂಜೂರು ಮಾಡಲಾಗಿತ್ತು. ಇದರಿಂದ ಸರ್ಕಾರಕ್ಕೆ 67 ಲಕ್ಷ ರೂ. ನಷ್ಟವಾಗಿತ್ತು ಎಂದು ವಿವರಿಸಲಾಗಿದೆ. ಈ ಎಜೆಎಲ್ ಅನ್ನು ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ನೆಹರೂ ಕುಟುಂಬದ ಸದಸ್ಯರು ನಿಯಂತ್ರಿಸುತ್ತಿದ್ದಾರೆ. ಇದೇ ಸಂಸ್ಥೆಯ ಒಡೆತನದಲ್ಲಿ ನ್ಯಾಷನಲ್ ಹೆರಾಲ್ಡ್ ಇದೆ.
ಭೂಮಿ ಮಂಜೂರು ವೇಳೆ ಹೂಡಾ ಸಿಎಂ ಆಗಿದ್ದರು. ಎಜೆಎಲ್‌ಗೆ ಆಗ ವೋರಾ ಮುಖ್ಯಸ್ಥರಾಗಿದ್ದರು. 3500 ಚದರಡಿ ಭೂಮಿಯನ್ನು ಎಜೆಎಲ್‌ಗೆ 1982ರಲ್ಲಿ ನೀಡಲಾಗಿತ್ತು. 1992ರ ವರೆಗೂ ಯಾವುದೇ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. 1996ರಲ್ಲಿ ಅದರ ಭೋಗ್ಯದ ಅವಧಿ ಮೀರಿದ್ದರಿಂದ ವಾಪಸ್ ಪಡೆಯಲಾಯಿತು. ಆದರೆ ಅದೇ ಭೂಮಿಯನ್ನು 1982ರ ಬೆಲೆಯಲ್ಲೇ 2005ರಲ್ಲಿ ಪುನಃ ಎಜೆಎಲ್‌ಗೆ ನೀಡಲಾಗಿದೆ ಎಂದು ವಿವರಿಸಲಾಗಿದೆ. ಚುನಾವಣೆ ಸಮೀಪಿಸಿದಾಗ ಸರ್ಕಾರ ಇಂಥದ್ದೇ ತಂತ್ರಗಳಿಗೆ ಇಳಿಯುತ್ತದೆ. ಮೋದಿ ಸರ್ಕಾರ ಇಷ್ಟು ವರ್ಷದಲ್ಲಿ ಆರೋಪ ಮಾಡಿ ದೆಯೇ ಹೊರತು ದಾಖಲೆ ಒದಗಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.