ರಾತ್ರಿ ಪಾಳಿಯಲ್ಲಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ನಿಂದ ಸಹೋದ್ಯೋಗಿಯ ಮೇಲೆ ರೇಪ್
Team Udayavani, Aug 22, 2022, 10:16 PM IST
ಗೋರಖ್‌ಪುರ: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮ್ಯಾನೇಜರ್ ತನ್ನ 23 ವರ್ಷದ ಸಹೋದ್ಯೋಗಿ ಮೇಲೆ ಅತ್ಯಾಚಾರ ಮತ್ತು ಥಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಆಸ್ಪತ್ರೆಯ ಸ್ವಾಗತಕಾರಿಣಿ ಮಹಿಳೆ ಶನಿವಾರ ರಾತ್ರಿ ಪಾಳಿಯಲ್ಲಿದ್ದಾಗ ಈ ಘಟನೆ ನಡೆದಿದೆ.ಪೊಲೀಸರ ಪ್ರಕಾರ, 36 ವರ್ಷದ ಮ್ಯಾನೇಜರ್, ಮಹಿಳೆಗೆ ಬಾಕಿ ಇರುವ ಸಂಬಳವನ್ನು ನೀಡುವ ನೆಪದಲ್ಲಿ ತನ್ನ ಕ್ಯಾಬಿನ್‌ಗೆ ಕರೆದಿದ್ದು, ಒಳಗೆ ಹೋದಾಗ, ಅವನು ಅವಳಿಗೆ ಕೇವಲ 500 ರೂ ಕೊಟ್ಟನು. ಮಹಿಳೆ ತನ್ನ ಸಂಪೂರ್ಣ ಸಂಬಳಕ್ಕೆ ಬೇಡಿಕೆಯಿಟ್ಟಾಗ ಅವನು ನಿರಾಕರಿಸಿದ್ದು, ತಕ್ಷಣವೇ ಅವಳ ಮೇಲೆ ಬಲವಂತ ಮಾಡಿದ್ದು, ಆಕೆ ಕೃತ್ಯವನ್ನು ವಿರೋಧಿಸಿದ ನಂತರ ಥಳಿಸಿದ್ದಾನೆ ಮತ್ತು ಸಿಬ್ಬಂದಿಯೊಬ್ಬರು ತನ್ನ ಕ್ಯಾಬಿನ್ ಕಡೆಗೆ ಬರುತ್ತಿರುವುದನ್ನು ಅಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳಲ್ಲಿ ನೋಡಿದ ನಂತರವೇ ಆಕೆಯನ್ನು ಬಿಟ್ಟಿದ್ದಾನೆ.
ಭಾನುವಾರದಂದು ಮಹಿಳೆ ತನ್ನ ಕುಟುಂಬಕ್ಕೆ ಸಂಪೂರ್ಣ ಘಟನೆಯನ್ನು ವಿವರಿಸಿದಳು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ದೂರಿನ ಮೇರೆಗೆ ಆಸ್ಪತ್ರೆಯ ಮ್ಯಾನೇಜರ್ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದು ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಶಹಪುರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಣಧೀರ್ ಮಿಶ್ರಾ ತಿಳಿಸಿದ್ದಾರೆ.ಇದೇ ವೇಳೆ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.