ಮೌಡ್ಯಕ್ಕೆ ಬಲಿಯಾದ ಗೃಹಿಣಿ
Team Udayavani, Jan 1, 2019, 12:30 AM IST
ಮುಂಬಯಿ: ಮಕ್ಕಳ ವಿಚಾರದಲ್ಲಿ ಗಂಡು, ಹೆಣ್ಣೆಂಬ ಬೇಧ ಬೇಡ ಎಂಬ ಅರಿವನ್ನು ಮೂಡಿಸಲು ಸರಕಾರಗಳು ದಶಕಗಳಿಂದ ಪ್ರಯತ್ನಿಸುತ್ತಿದ್ದರೂ, ದೇಶದ ಕೆಲವು ಭಾಗಗಳಲ್ಲಿ ಅದರ ಪ್ರಭಾವ ಅಷ್ಟಾಗಿ ಆಗಿಲ್ಲ. ಇದಕ್ಕೆ ತಾಜಾ ಉದಾಹರಣೆಯೆಂಬಂತೆ, ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಜಲ್ಗಾಂವ್ ಪಟ್ಟಣದಲ್ಲಿ ಹಿರಿಯರ ಗಂಡು ಸಂತಾನದ ದುರಾಸೆಗೆ ಗೃಹಿಣಿಯೊಬ್ಬರು ಬಲಿಯಾಗಿದ್ದಾರೆ. ಮೀರಾ ಎಖಾಂಡೆ ಅವರು ಮೃತ ದುರ್ದೈವಿ.
ಮಜಲ್ಗಾಂವ್ನಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ ಮೀರಾ, ಏಳು ಹೆಣ್ಣುಮಕ್ಕಳ ತಾಯಿ. ಇದಾದ ನಂತರ ಆಕೆ ಎರಡು ಬಾರಿ ಗರ್ಭಿಣಿಯಾದಾಗಲೂ ಪ್ರಸವ ಪೂರ್ವ ಪರೀಕ್ಷೆಗಳಿಂದ ಗರ್ಭದಲ್ಲಿರುವುದು ಹೆಣ್ಣು ಮಗುವೆಂದು ದೃಢಪಡಿಸಿಕೊಂಡಿದ್ದ ಅವರ ಗಂಡನ ಮನೆಯವರು ಗರ್ಭಪಾತ ಮಾಡಿಸಿದ್ದರು. “ಗಂಡು ಮಗು ಬೇಕೇ ಬೇಕು’ ಎಂದು ಆಕೆಯ ಮೇಲೆ ಒತ್ತಡವಿದ್ದಿದ್ದರಿಂದ ಹತ್ತನೇ ಬಾರಿ ಗರ್ಭಿಣಿಯಾಗಿದ್ದರು. 24 ವಾರಗಳ ಗರ್ಭಿಣಿಯಾಗಿದ್ದ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿ ಗರ್ಭದಲ್ಲೇ ತೀರಿ ಹೋದ ಮಗುವಿಗೆ ಜನ್ಮ ನೀಡಿದ್ದಾರೆ. ಈ ಹೆರಿಗೆಯ ವೇಳೆ ಅಧಿಕವಾದ ರಕ್ತಸ್ರಾವವಾಗಿದ್ದರಿಂದ ಅವರು ಹೆರಿಗೆ ಸಂದರ್ಭದಲ್ಲೇ ತೀರಿ ಹೋದರೆಂದು ಆಸ್ಪತ್ರೆಯ ಮೂಲಗಳು ಹೇಳಿವೆ. ಆಧುನಿಕತೆಯ ನೆರಳಲ್ಲಿ ಭಾರತ ಬದಲಾಗುತ್ತಿದ್ದರೂ ಜನರ ಮೌಡ್ಯ ಮಾತ್ರ ಇನ್ನೂ ಹಾಗೆಯೇ ಉಳಿದಿದೆ ಎಂಬುದನ್ನು ಈ ಪ್ರಕರಣ ಸಾಬೀತು ಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.