ಆಧಾರ್ ಐಚ್ಛಿಕವಲ್ಲವೇ,ಪ್ಯಾನ್‌ಗೆ ಏಕೆ ಕಡ್ಡಾಯ? ಸುಪ್ರೀಂ
Team Udayavani, Apr 22, 2017, 3:45 AM IST
ನವದೆಹಲಿ: ಆಧಾರ್ ಐಚ್ಛಿಕವಾಗಿರಬೇಕೇ ಹೊರತು ಅದನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಆದೇಶಿಸಿದ್ದರೂ, ಪ್ಯಾನ್ ಕಾರ್ಡ್(ಪರ್ಮನೆಂಟ್ ಅಕೌಂಟ್ ನಂಬರ್) ಹೊಂದಲು ಆಧಾರ್ ಕಡ್ಡಾಯ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಪ್ಯಾನ್‌ಗೂ ಆಧಾರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾ. ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಈ ಕುರಿತು ಸರ್ಕಾರದ ವಿರುದ್ಧ ಕಿಡಿಕಾರಿದೆ. ಸಮಾಜ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಆಧಾರ್ ಅನ್ನು ಸರ್ಕಾರ ಕಡ್ಡಾಯಗೊಳಿಸುವಂತಿಲ್ಲ ಎಂದು ಮಾ.27ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಆದರೆ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಹಾಗೂ ಬ್ಯಾಂಕ್ ಖಾತೆ ತೆರೆಯಲು ಆಧಾರ್ ಅನ್ನು ಕಡ್ಡಾಯಗೊಳಿಸಬಹುದು ಎಂದೂ ಹೇಳಿತ್ತು. ಇದನ್ನು ಪ್ರಸ್ತಾಪಿಸಿದ ನ್ಯಾಯಪೀಠ, “ನಮ್ಮ ಆದೇಶದ ಹೊರತಾಗಿಯೂ ಏಕೆ ಆಧಾರ್ ಅನ್ನು ಕಡ್ಡಾಯಗೊಳಿಸುತ್ತಿದ್ದೀರಿ,’ ಎಂದು ಸರ್ಕಾರವನ್ನು ಪ್ರಶ್ನಿಸಿದೆ.
ದುರ್ಬಳಕೆ ತಡೆಯಲು ಕ್ರಮ: ಪೀಠದ ಪ್ರಶ್ನೆಗೆ ಉತ್ತರಿಸಿದ ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, “ನಕಲಿ ದಾಖಲೆಗಳನ್ನು ನೀಡಿ ಪಡೆದಿರುವ ಪ್ಯಾನ್ ಸಂಖ್ಯೆಯ ವಿವರಗಳನ್ನು ನೀಡುವ, ಒಬ್ಬರೇ ಹಲವು ಪ್ಯಾನ್ ಸಂಖ್ಯೆಗಳನ್ನು ಹೊಂದಿರುವ, ನಕಲಿ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳಿಗೆ ಹಣ ವರ್ಗಾಯಿಸುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಹಾಗಾಗಿ ಆಧಾರ್ ಕಡ್ಡಾಯ ಮಾಡಲಾಯಿತು,’ ಎನ್ನುವ ಮೂಲಕ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಇದಕ್ಕೆ ನ್ಯಾಯಪೀಠ, “ಈ ಸಮಸ್ಯೆಗೆ ಪ್ಯಾನ್‌ಗೆ ಆಧಾರ್ ಕಡ್ಡಾಯ ಮಾಡುವುದೇ ಪರಿಹಾರವೇ? ನ್ಯಾಯಾಲಯದ ಆದೇಶವಿದ್ದರೂ ನೀವು ಹೇಗೆ ಅದನ್ನು ಕಡ್ಡಾಯಗೊಳಿಸಿದಿರಿ’ ಎಂದು ಖಾರವಾಗಿ ಪ್ರಶ್ನಿಸಿತು. ಜತೆಗೆ, ಮುಂದಿನ ವಿಚಾರಣೆಯನ್ನು ಏ.25ಕ್ಕೆ ಮುಂದೂಡಿತು.
ಆದಾಯ ತೆರಿಗೆ ಕಾಯ್ದೆಯ 139 ಎಎ ಸೆಕ್ಷನ್‌ನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಿಪಿಐ ನಾಯಕ ಬಿನಾಯ್ ವಿಶ್ವಂ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಸೆಕ್ಷನ್ ಅನ್ವಯ, ಯಾರಲ್ಲಿ ಆಧಾರ್ ಕಾರ್ಡ್ ಇಲ್ಲವೋ, ಅವರಿಗೆ ಪ್ಯಾನ್ ಸಿಗುವುದಿಲ್ಲ. ಹೀಗಾದರೆ, ಆಧಾರ್ ಇಲ್ಲದಂತಹ ಜನರಿಗೆ ಬಹಳಷ್ಟು ತೊಂದರೆ ಆಗುತ್ತದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.