20 ಸಾವಿರ ಕೋಟಿಯಲ್ಲಿ ಟೀ ಕುಡಿದ್ರಾ?
Team Udayavani, May 15, 2017, 12:31 PM IST
ಹೊಸದಿಲ್ಲಿ: ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿರಿಸಿದ್ದ 20,000 ಕೋಟಿ ರೂ. ಅನುದಾನ ಎಲ್ಲಿ ಹೋಯ್ತು? ಚಹಾ ಕೂಟಗಳಿಗೆ ಖರ್ಚು ಮಾಡಿದಿರಾ? ಅಥವಾ ಅಧಿಕಾರಿಗಳ ಪ್ರವಾಸಕ್ಕೆ ಬಳಕೆಯಾಯಿತಾ? ಸುಪ್ರೀಂಕೋರ್ಟ್ ಹಾಕಿದ ಈ ಪ್ರಶ್ನೆಗಳಿಗೆ ಕಂಟ್ರೋಲರ್ ಹಾಗೂ ಆಡಿಟರ್ ಜನರಲ್ (ಸಿಎಜಿ) ಬಳಿ ಉತ್ತರವೇ ಇರಲಿಲ್ಲ! ಇದನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದ ನ್ಯಾಯಾಲಯ, ಹಾಗಾದರೆ ಇಷ್ಟೊಂದು ದೊಡ್ಡ ಮೊತ್ತದ ಹಣ ಎಲ್ಲಿ ಹೋಯಿತು? ಎಂದು ಪ್ರಶ್ನಿಸಿತು. ರಿಯಲ್ ಎಸ್ಟೇಟ್ ಸಂಸ್ಥೆಗಳಿಂದ ಸಂಗ್ರಹಿಸಿರುವ ಸೆಸ್ ಹಣ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕೆ ಬಳಕೆಯಾಗಿಲ್ಲ ಎಂದು ಆರೋಪಿಸಿ ಎನ್‌ಜಿಒವೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಮದನ್ ಬಿ. ಲೋಕೂರ್ ಮತ್ತು ನ್ಯಾ| ದೀಪಕ್ ಗುಪ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಸುಪ್ರೀಂಕೋರ್ಟ್, ’20 ಸಾವಿರ ಕೋಟಿಯಷ್ಟು ದೊಡ್ಡ ಮಟ್ಟದ ಹಣ ಏನಾಗಿದೆ ಎಂಬುದು ಸ್ವತಃ ಸಿಎಜಿಗೇ ಗೊತ್ತಿಲ್ಲ! ಹಣ ಏನಾಗಿದೆ ಎಂದು ಮೊದಲು ಪತ್ತೆಹಚ್ಚಿ’ ಎಂದು ಸಿಎಜಿಗೆ ಸೂಚಿಸಿತು.
‘1996ರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ’ ಅಡಿಯಲ್ಲಿ ಪ್ರತಿಯೊಂದು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು 1996ರಿಂದ 2017ರ ಮೇ 31ರವರೆಗೆ ಎಷ್ಟು ಹಣ ಸಂಗ್ರಹಿಸಿವೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಹಣ ಸಂಗ್ರಹಿಸಿದ್ದು, ಅದನ್ನು ಈವರೆಗೂ ಮಂಡಳಿಗೆ ಸಲ್ಲಿಸದಿದ್ದರೆ, ಹಣವನ್ನು ಆರು ವಾರಗಳ ಒಳಗೆ ಮಂಡಳಿಗೆ ಸಲ್ಲಿಸಿ, ಸಿಎಜಿಗೆ ಮಾಹಿತಿ ನೀಡಬೇಕು’ ಎಂದು ಪೀಠ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.