Election Rally; ಬಿಹಾರ ಸಿಎಂ ಹೇಳಿಕೆಗೆ ಪ್ರಧಾನಿ ಮೋದಿ ಆಕ್ರೋಶ
ಇನ್ನೆಷ್ಟು ನೈತಿಕವಾಗಿ ಕೆಳಕ್ಕಿಯುತ್ತೀರಿ?
Team Udayavani, Nov 8, 2023, 9:22 PM IST
ಗುಣಾ/ಮೊರೇನಾ/ಪಾಟ್ನಾ:”ಇನ್ನೆಷ್ಟು ನೈತಿಕವಾಗಿ ಅಧಃಪನಕ್ಕೆ ಇಳಿಯುತ್ತೀರಿ?’ ಹೀಗೆಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಧ್ಯಪ್ರದೇಶ ಗುಣಾ, ಮೊರೇನಾ ಮತ್ತು ದಮೋಹ್‌ನಲ್ಲಿ ಬುಧವಾರ ಚುನಾವಣಾ ರ‍್ಯಾಲಿಗಳಲ್ಲಿ ಮಾತನಾಡಿದ ಅವರು ನಿತೀಶ್ ಹೆಸರೆಲ್ಲದೆ ಮಹಿಳೆಯರ ವಿರುದ್ಧ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.
“ಐ.ಎನ್.ಡಿ.ಐ.ಎ. ಮೈತ್ರಿಕೂಟದ ನಾಯಕರೊಬ್ಬರು ಮಹಿಳೆಯರ ವಿರುದ್ಧ ತುತ್ಛವಾಗಿ ಮಾತನಾಡಿದ್ದಾರೆ. ಆದರೆ, ಅವರ ಮೈತ್ರಿಕೂಟದವರು ಯಾರೂ ಅದನ್ನು ಖಂಡಿಸಿಯೇ ಇಲ್ಲ. ಇಂಥವರು ನಿಮ್ಮ ಗೌರವವನ್ನು ಹೇಗೆ ರಕ್ಷಿಸಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಮಹಿಳಾ ನಾಯಕಿಯರು ಇರುವಾಗಲೇ ಇಂಥ ಹೇಳಿಕೆ ನೀಡಿದ್ದಾರೆ ಎಂದು ದೂರಿದರು ಪ್ರಧಾನಿ. ಇಂಥ ನಿಲುವು ಹೊಂದಿರುವವರು ಇನ್ನೆಷ್ಟು ಪ್ರಮಾಣದಲ್ಲಿ ನೈತಿಕವಾಗಿ ಅಧಃಪತನಕ್ಕೆ ಇಳಿಯಬಹುದು? ಮಹಿಳೆಯರ ರಕ್ಷಣೆ ಮತ್ತು ಗೌರವ ಕಾಪಾಡುವ ನಿಟ್ಟಿನಲ್ಲಿ ನಾನು ಸಾಧ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
70 ಸಾವಿರ ಕೋಟಿ:
ಸಮಾನ ಶ್ರೇಣಿ, ಸಮಾನ ಪಿಂಚಣಿಗೆ ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ 500 ಕೋಟಿ ರೂ. ನೀಡಿತ್ತು. ಎನ್‌ಡಿಎ ಆಡಳಿತದ ಅವಧಿಯಲ್ಲಿ 70 ಸಾವಿರ ಕೋಟಿ ರೂ. ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಮೊರೇನಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ‍್ಯಾಲಿಯಲ್ಲಿ ಅವರು ಮಾತನಾಡಿದರು.
“ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸಮಾನ ಶ್ರೇಣಿ; ಸಮಾನ ಪಿಂಚಣಿ (ಒಆರ್‌ಒಪಿ) ಯೋಜನೆ ಜಾರಿಗೆ 500 ಕೋಟಿ ರೂ. ನೀಡಲಾಗಿತ್ತು. ಅದು ಅತ್ಯಂತ ಕನಿಷ್ಠವೆಂದು ಗೊತ್ತಿದ್ದರೂ ಇಂಥ ನಿರ್ಧಾರ ಕೈಗೊಂಡಿತ್ತು. 2014ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಆ ಮೊತ್ತವನ್ನು 70 ಸಾವಿರ ಕೋಟಿ ರೂ.ಗೆ ಏರಿಕೆ ಮಾಡಲಾಯಿತು. ಈ ಮೂಲಕ ನಿವೃತ್ತ ಯೋಧರಿಗೆ ಅನುಕೂಲ ಮಾಡಿದ್ದೇವೆ’ ಎಂದರು. ಕಾಂಗ್ರೆಸ್ ಯಾವತ್ತೂ ದೇಶದ ಭದ್ರತೆಯ ಜತೆಗೆ ಆಟವಾಡಿತ್ತು ಎಂದು ದೂರಿದ ಪ್ರಧಾನಿ, ದೇಶದ ಮೊತ್ತ ಮೊದಲ ಹಗರಣ ರಕ್ಷಣಾ ಪಡೆಗಳಿಗೆ ಸಂಬಂಧಿಸಿದ್ದೇ ಆಗಿತ್ತು ಎಂದು ಹೇಳಿದ್ದಾರೆ.
ರಿಮೋಟ್ ಕಂಟ್ರೋಲ್:
ಕಾಂಗ್ರೆಸ್‌ಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿದ್ದಾರೆ. ಆದರೆ, ಅವರನ್ನು ರಿಮೋಟ್‌ನಿಂದ ನಿಯಂತ್ರಿಸಲಾಗುತ್ತದೆ ಎಂದು ಪ್ರಧಾನಿ ಆರೋಪಿಸಿದರು. “ದೂರದಿಂದ ಅವರು ನಿಯಂತ್ರಿಸಲ್ಪಡುವಾಗ ಸನಾತನ ಧರ್ಮದ ವಿರುದ್ಧ ಮಾತನಾಡುತ್ತಾರೆ. ಮಂಗಳವಾರ ಅವರು ಬಿಜೆಪಿಯಲ್ಲಿರುವ ಐವರು ಪಾಂಡವರ ಬಗ್ಗೆ ಮಾತನಾಡಿದ್ದರು. ಪಾಂಡವರ ರೀತಿಯಲ್ಲಿಯೇ ನಾವು ಹೆಜ್ಜೆ ಹಾಕುತ್ತಿದ್ದೇವೆ ಎಂದು ಹೆಮ್ಮೆಯಾಗುತ್ತಿದೆ’ ಎಂದರು.
ರಾಹುಲ್, ಪ್ರಿಯಾಂಕಾ ಪ್ರಚಾರ
ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಚಾರ ನಡೆಸಿ ಬಿಜೆಪಿ ಆದಿವಾಸಿಗಳನ್ನು ವಂಚಿಸಲು ಪ್ರಯತ್ನಿಸುತ್ತಿದೆ. ದೇಶದ ಮುಖ್ಯ ವಾಹಿನಿಯಲ್ಲಿ ಸೇರಲು ಅವರಿಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ದೂರಿದರು.
ಆದಿವಾಸಿಗಳನ್ನು ವನವಾಸಿಗಳು ಎಂದು ಹೇಳಿ ಅವಮಾನ ಮಾಡುತ್ತಿದೆ. ಆದಿವಾಸಿ ಮತ್ತು ವನವಾಸಿ ಎಂಬ ಪದಗಳ ನಡುವೆ ಭಾರೀ ವ್ಯತ್ಯಾಸವಿದೆ ಎಂದರು. ಬಿಜೆಪಿ ನಾಯಕರು ಆದಿವಾಸಿಗಳು ಇಂಗ್ಲಿಷ್ ಕಲಿಯುವುದು ಬೇಡ ಎನ್ನುತ್ತಾರೆ. ಆದರೆ, ನಾವು ಛತ್ತೀಸ್‌ಗಢದ ಸ್ಥಳೀಯ ಭಾಷೆ, ಹಿಂದಿ ಮತ್ತು ಇಂಗ್ಲಿಷ್ ಕಲಿಯಲು ಒತ್ತಾಯಿಸುತ್ತೇವೆ ಎಂದರು.
ಮಧ್ಯಪ್ರದೇಶದ ಇಂದೋರ್‌ನಲ್ಲಿ ಪ್ರಚಾರ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ದೇಶದ ಯುವ ಜನರಿಗೆ ಉದ್ಯೋಗಕ್ಕಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಕಾಂಗ್ರೆಸ್ ಸ್ಥಾಪಿಸಿತು. ಆದರೆ, ಬಿಜೆಪಿ ಅದನ್ನು ಕೈಗಾರಿಕೋದ್ಯಮಿಗಳಿಗೆ ನೀಡುತ್ತಿದೆ ಎಂದು ದೂರಿದರು.
ಕ್ಷಮೆ ಕೋರಿದ ಬಿಹಾರ ಸಿಎಂ
ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪಕ್ಕೆ ಗುರಿಯಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅಲ್ಲಿನ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಕ್ಷಮೆ ಯಾಚಿಸಿದ್ದಾರೆ. ಜಾತಿ ಗಣತಿಯ ವಿವರಗಳನ್ನು ವಿಧಾನಮಂಡಲದಲ್ಲಿ ಮಂಡಿಸುವ ವೇಳೆಗೆ ಅವರು ಆಡಿದ್ದ ಮಾತುಗಳು ವಿವಾದಕ್ಕೆ ಕಾರಣವಾಗಿದ್ದವು. ಪ್ರಧಾನಿ ಮೋದಿ, ಬಿಜೆಪಿಯ ನಾಯಕರು, ಎಂಐಎಂ ನಾಯಕ ಅಸಾಸುದ್ದೀನ್ ಒವೈಸಿ ಸೇರಿದಂತೆ ಪ್ರಮುಖರು ಅವರ ಮಾತುಗಳನ್ನು ಕಟುವಾಗಿ ಟೀಕಿಸಿದ್ದರು.
ರಾಷ್ಟ್ರೀಯ ಮಹಿಳಾ ಆಯೋಗ ಕೂಡ ಬಿಹಾರ ವಿಧಾನಸಭೆ ಸ್ಪೀಕರ್ ಅವರಿಗೆ ಸೂಚನೆ ನೀಡಿ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿತ್ತು. ವಿಧಾನಸಭೆಗೆ ನಿತೀಶ್ ಆಗಮಿಸಿದಾಗ ಪ್ರತಿಪಕ್ಷ ಬಿಜೆಪಿ ಶಾಸಕರು ಅವರ ವಿರುದ್ಧ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಪಾಟ್ನಾದ ಸ್ಥಳೀಯ ಕೋರ್ಟೊಂದರಲ್ಲಿ ಸಿಎಂ ವಿರುದ್ಧ ಕೇಸು ಕೂಡ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.