RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
ವ್ಯಾಲೆಟ್‌ಗಳನ್ನೂ ಬ್ಯಾಂಕ್ ಖಾತೆಯಂತೆ ಬಳಸಲು ಆರ್‌ಬಿಐ ಒಪ್ಪಿಗೆ
Team Udayavani, Dec 29, 2024, 7:30 AM IST
ನವದೆಹಲಿ: ಡಿಜಿಟಲ್ ಭಾರತ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಯುಪಿಐ ಪಾವತಿಗೆ ಮತ್ತಷ್ಟು ಅವಕಾಶವನ್ನು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನೀಡಿದೆ. ಬ್ಯಾಂಕ್ ಅಕೌಂಟ್‌ಗಳನ್ನು ಥರ್ಡ್‌ಪಾರ್ಟಿ ಆ್ಯಪ್‌ಗಳಿಗೆ ಲಿಂಕ್ ಮಾಡಿಕೊಳ್ಳುವಂತೆ ಡಿಜಿಟಲ್ ವ್ಯಾಲೆಟ್‌ಗಳನ್ನು ಸಹ ಥರ್ಡ್ ಪಾರ್ಟಿ ಆ್ಯಪ್‌ಗಳಿಗೆ ಲಿಂಕ್ ಮಾಡಿಕೊಳ್ಳಲು ಅವಕಾಶ ನೀಡಿದೆ.
ಇದರಿಂದಾಗಿ ಪಾವತಿ ವ್ಯವಸ್ಥೆ ಮತ್ತಷ್ಟು ಸುಲಭವಾಗಿದ್ದು, ಗ್ರಾಹಕರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ ಎಂದು ಆರ್‌ಬಿಐ ಹೇಳಿದೆ. ಡಿಜಿಟಲ್ ವ್ಯಾಲೆಟ್‌ಗಳನ್ನು ನಿರ್ವಹಣೆ ಮಾಡುವ ಪ್ರೀಪೇಯ್ಡ ಪೇಮೆಂಟ್ ಇನ್‌ಸ್ಟ್ರೆಮೆಂಟ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕೆವೈಸಿ ವ್ಯವಸ್ಥೆಯೊಂದಿಗೆ ಜೋಡಣೆ ಮಾಡಿದ್ದರೆ ಈ ಅವಕಾಶವನ್ನು ಗ್ರಾಹಕರು ಬಳಸಿಕೊಳ್ಳಬಹುದಾಗಿದೆ.
ಈ ಮೊದಲು ಯುಪಿಐಗೆ ಬ್ಯಾಂಕ್ ಖಾತೆಗಳನ್ನು ಮಾತ್ರ ಲಿಂಕ್ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಅಲ್ಲದೇ ಯುಪಿಐ ಮೂಲಕ ಬ್ಯಾಂಕ್ ಖಾತೆಗಳಿಗಷ್ಟೇ ಹಣ ಕಳುಹಿಸಲು ಅವಕಾಶವಿತ್ತು. ಡಿಜಿಟಲ್ ವ್ಯಾಲೆಟ್‌ಗಳಲ್ಲಿರುವ ಹಣವನ್ನು ವ್ಯಾಪಾರಕ್ಕಷ್ಟೇ ಬಳಕೆ ಮಾಡಿಕೊಳ್ಳಬಹುದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.