6 ಕೋಟಿ ಮೌಲ್ಯದ ಚಿನ್ನ ದರೋಡೆ: ಆರೋಪಿಗಳ ಪತ್ತೆಗೆ ನೆರವಾದ 100 ರೂ. ಪೇಟಿಎಂ ಪಾವತಿ

Team Udayavani, Sep 3, 2022, 2:12 PM IST

crime

ನವದೆಹಲಿ : ಪಹರ್‌ಗಂಜ್ ಪ್ರದೇಶದಲ್ಲಿ ಇಬ್ಬರ ಕಣ್ಣಿಗೆ ಮೆಣಸಿನ ಪುಡಿ ಎರಚಿ 6 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನದಿಂದ ಪೇಟಿಎಂ ವಹಿವಾಟಿನ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳನ್ನು ನಜಾಫ್‌ಗಢ ನಿವಾಸಿಗಳಾದ ನಾಗೇಶ್ ಕುಮಾರ್ (28), ಶಿವಂ (23), ಮತ್ತು ಮನೀಶ್ ಕುಮಾರ್ (22) ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೀಡಿಯೊದಲ್ಲಿ, ಇಬ್ಬರು ವ್ಯಕ್ತಿಗಳು, ಒಬ್ಬ ಪೊಲೀಸ್ ಸಮವಸ್ತ್ರದಲ್ಲಿ, ರಸ್ತೆಯಲ್ಲಿ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಕೆಲ ಹೊತ್ತಿನ ನಂತರ, ಅವರು ಇಬ್ಬರು ವ್ಯಕ್ತಿಗಳನ್ನು ನಿಲ್ಲಿಸುತ್ತಾರೆ. ಈ ಮಧ್ಯೆ, ಇನ್ನೂ ಇಬ್ಬರು ಅವರೊಂದಿಗೆ ಸೇರುತ್ತಾರೆ. ನಂತರ ಅವರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಪಾರ್ಸೆಲ್ ನೊಂದಿಗೆ ಓಡಿ ಹೋಗಿದ್ದಾರೆ.

ಘಟನೆ ಕುರಿತು ಬುಧವಾರ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ದೂರುದಾರ ಸೋಮವೀರ್ ಅವರು ಚಂಡೀಗಢದ ಪಾರ್ಸೆಲ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ 4.15 ರ ಸುಮಾರಿಗೆ, ಅವರು ತಮ್ಮ ಸಹೋದ್ಯೋಗಿ ಜಗದೀಪ್ ಸೈನಿ ಅವರೊಂದಿಗೆ ಪಹರ್‌ಗಂಜ್‌ನಲ್ಲಿರುವ ತಮ್ಮ ಕಚೇರಿಯಿಂದ ಪಾರ್ಸೆಲ್‌ಗಳನ್ನು ತೆಗೆದುಕೊಂಡು ಡಿಬಿಜಿ ರಸ್ತೆಯ ಕಡೆಗೆ ಹೋಗುತ್ತಿದ್ದರು.ಅವರು ಮಿಲೇನಿಯಮ್ ಹೋಟೆಲ್ ಬಳಿ ತಲುಪಿದಾಗ, ಅಲ್ಲಿ ಇಬ್ಬರನ್ನು ನೋಡಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರಲ್ಲಿ ಒಬ್ಬರು ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದರು, ಅವರು ತಪಾಸಣೆಗಾಗಿ ತಮ್ಮ ಬ್ಯಾಗ್‌ಗಳನ್ನು ಕೇಳಿದರು ಎಂದು ಅವರು ಹೇಳಿದರು.

ಅಷ್ಟರಲ್ಲಿ ಮತ್ತಿಬ್ಬರು ಬಂದು ಅವರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಚೀಲವನ್ನು ಕೊಡಿ ಇಲ್ಲವಾದಲ್ಲಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಆರೋಪಿಗಳು ಚಿನ್ನಾಭರಣಗಳಿದ್ದ ಪಾರ್ಸೆಲ್‌ಗಳನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಪೊಲೀಸರು ಘಟನೆ ನಡೆದ ಏಳು ದಿನಗಳ 700 ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು ಮತ್ತು ಸ್ಥಳದ ಬಳಿ ಸ್ಥಳೀಯ ಗುಪ್ತಚರವನ್ನು ಸಂಗ್ರಹಿಸಿ, ಘಟನಾ ಸ್ಥಳದ ಸಮೀಪ ನಾಲ್ವರ ಚಟುವಟಿಕೆಗಳು ಅನುಮಾನಾಸ್ಪದವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಕ್ಯಾಬ್ ಡ್ರೈವರ್‌ನೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದ್ದು, ಅವರಲ್ಲಿ ಒಬ್ಬ ಚಹಾ ಖರೀದಿಸಲು ನಗದು ಬದಲಾಗಿ 100 ರೂಪಾಯಿಯನ್ನು ಪೇಟಿಎಂ ಮೂಲಕ ಚಾಲಕನ ಖಾತೆಗೆ ವರ್ಗಾಯಿಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ.

ವ್ಯವಹಾರವನ್ನು ವಿಶ್ಲೇಷಿಸಲಾಗಿ ಅಪರಾಧಿಗಳನ್ನು ನಜಾಫ್‌ಗಢ ನಿವಾಸಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ರಾಜಸ್ಥಾನಕ್ಕೆ ಹೋಗಿರುವುದನ್ನು ಪೊಲೀಸರು ಪತ್ತೆ ಮಾಡಿ, ಜೈಪುರಕ್ಕೆ ತಂಡವನ್ನು ಕಳುಹಿಸಿ ಮೂವರನ್ನು ಬಂಧಿಸಲಾಗಿದೆ.

ಐಐಎಫ್‌ಎಲ್‌ನಲ್ಲಿ ಒಟ್ಟು 6,270 ಗ್ರಾಂ ಚಿನ್ನ, ಮೂರು ಕೆಜಿ ಬೆಳ್ಳಿ, 500 ಗ್ರಾಂ ಚಿನ್ನ ಮತ್ತು 106 ಕಚ್ಚಾ ವಜ್ರಗಳು ಮತ್ತು ಇತರ ವಜ್ರದ ಆಭರಣಗಳು ಸೇರಿ 5.5 ರಿಂದ 6 ಕೋಟಿ ರೂ. ಮೌಲ್ಯದ ನಗವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇನ್ನುಳಿದ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದ್ದು, ದರೋಡೆಯ ಮಾಸ್ಟರ್ ಮೈಂಡ್ ನಾಗೇಶ್ ತನ್ನ ಸ್ನೇಹಿತರು ಮತ್ತು ತಾಯಿಯ ಚಿಕ್ಕಪ್ಪನೊಂದಿಗೆ ಅಪರಾಧ ಎಸಗಲು ಯೋಜಿಸಿದ್ದನು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.