ಮಾನವ ಹಕ್ಕುಗಳ ಉಲ್ಲಂಘನೆ ವರದಿ ತಪ್ಪು: ಭಾರತ ಆಕ್ರೋಶ

Team Udayavani, Jun 21, 2018, 6:00 AM IST

p-24.jpg

ಜಿನೇವಾ/ನವದೆಹಲಿ: ಭಾರತ-ಪಾಕಿಸ್ತಾನ ನಡುವಿನ ಗಡಿ ನಿಯಂತ್ರಣ ರೇಖೆಗೆ ಅಂತಾರಾಷ್ಟ್ರೀಯ ಸಮುದಾಯದ ಪ್ರವೇಶ ಅತ್ಯಗತ್ಯವಾಗಿದೆ ಎಂಬ ಯುಎನ್‌ಎಚ್‌ಆರ್‌ಸಿಯ ಅಧ್ಯಕ್ಷ ಝೈದ್‌ ರಿಯಾದ್‌ ಅಲ್‌ ಹುಸೇನ್‌ ಹೇಳಿಕೆಗೆ ಭಾರತ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. ಕಾಶ್ಮೀರದಲ್ಲಿ ಭಾರತ ಮಾನವ ಹತ್ತುಗಳ ಉಲ್ಲಂಘನೆ ಮಾಡುತ್ತಿದೆ ಎಂಬುದೇ ತಪ್ಪು. ಜತೆಯಲ್ಲಿ ಭಯೋತ್ಪಾದಕ ಸಂಘಟನೆಗಳನ್ನು “ಸಶಸ್ತ್ರ ಗುಂಪು’ಗಳು ಎಂದು ಕರೆದಿರುವುದಲ್ಲದೇ, ಭಯೋತ್ಪಾದಕರನ್ನು “ನಾಯಕ’ರು ಎಂದು ವರದಿಯಲ್ಲಿ ಕರೆಯ ಲಾಗಿದೆ. ಇಂಥ ವರದಿ ಕೊಟ್ಟಿರುವ ಯುಎನ್‌ಎಚ್‌ಆರ್‌ಸಿ ಕ್ರಮ ತೀರಾ ಕಳವಳಕಾರಿ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಕಾಯಂ ರಾಯಭಾರಿ ರಾಜೀವ್‌ ಕೆ. ಚಂದರ್‌ ತಿರುಗೇಟು ನೀಡಿದ್ದಾರೆ. 

ಜಮ್ಮು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿದ್ದು, ಪ್ರಜಾಪ್ರಭುತ್ವ ಜಾರಿಯಲ್ಲಿದೆ. ಅಲ್ಲದೆ, ಕಳೆದ ವಾರವಷ್ಟೇ ಉಗ್ರರಿಂದ ಹತ್ಯೆಯಾದ ಪತ್ರಕರ್ತ ಸುಝಾತ್‌ ಬುಖಾರಿ ಮತ್ತು ಯೋಧ ಔರಾಂಗಜೇಬ್‌ ಪ್ರಕರಣಗಳು ಮಾನವ ಹಕ್ಕುಗಳ ಮಂಡಳಿ ಕಣ್ಣಿಗೆ ಕಾಣುತ್ತಲೇ ಇಲ್ಲ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಳೆದ ಸೋಮವಾರವಷ್ಟೇ ಝೈದ್‌, ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆ ತನಿಖೆಗಾಗಿ ಸಮಿತಿ ರಚಿಸಬೇಕು ಎಂದು ಹೇಳಿದ್ದರು. ಮಂಡಳಿ ಅಧ್ಯಕ್ಷರ ಈ ಪ್ರಸ್ತಾಪವನ್ನು ಪಾಕಿಸ್ತಾನ ಸ್ವಾಗತಿಸಿದೆ. 

ಅಮೆರಿಕ ಹೊರಕ್ಕೆ: ಇದೇ ವೇಳೆ, ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂಬ ವರದಿ ನೀಡಿ ಸುದ್ದಿಯಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಅಮೆರಿಕ ಶಾಕ್‌ ನೀಡಿದೆ.  ಇಸ್ರೇಲ್‌ ವಿರುದ್ಧ ವರದಿ ಕೊಟ್ಟ ಕ್ರಮದಿಂದ ಆಕ್ರೋಶಗೊಂಡಿರುವ ಅದು, ಮಂಡಳಿಯಿಂದಲೇ ಹೊರಬರುವುದಾಗಿ ಘೋಷಣೆ ಮಾಡಿದೆ. ಮಾನವ ಹಕ್ಕುಗಳನ್ನು ಉಲ್ಲಂ ಸುವರ ವಿರುದ್ಧ ಮೌನವಾಗಿರುವ ಮೂಲಕ ಈ ಸಂಸ್ಥೆ ನಾಚಿಕೆಯಿಲ್ಲದೆ ಬೂಟಾಟಿಕೆ ಮಾಡುತ್ತಿದೆ ಎಂದು ಕಿಡಿಕಾರಿದೆ. ಇಸ್ರೇಲ್‌ ವಿರುದ್ಧ ಕಾರಣವಿಲ್ಲದೆ ಮಂಡಳಿ ಕಿಡಿ ಕಾರುತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂ ಸುವವರೇ ಮಂಡಳಿಗೆ ಆಯ್ಕೆಯಾಗುತ್ತಾ ಬರುತ್ತಿದ್ದಾರೆ. ಜಗತ್ತಿನಲ್ಲಿ ಮಾನವ ಹಕ್ಕುಗಳನ್ನು ಪದೇ ಪದೆ ಉಲ್ಲಂ ಸುತ್ತಾ ಬರುವವರು ವಿಶ್ವಸಂಸ್ಥೆಯ ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಅಂಥ ರಾಷ್ಟ್ರಗಳ ತಪ್ಪುಗಳನ್ನು ಮುಚ್ಚಿಡುವುದಕ್ಕಾಗಿ ಈ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ ರಾಷ್ಟ್ರಗಳನ್ನು ಬಲಿಪಶು ಮಾಡಲಾಗುತ್ತಿದೆ. ಇಂಥ ಮಂಡಳಿಯಲ್ಲಿ ಅಮೆರಿಕ ಮುಂದುವರಿಯಲು ಸಾಧ್ಯವೇ ಇಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಅಮೆರಿಕದ ರಾಯಭಾರಿ ನಿಕ್ಕಿ ಹ್ಯಾಲೆ ಘೋಷಿಸಿದ್ದಾರೆ.

ಅಮೆರಿಕ ಆರೋಪಗಳನ್ನು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆéಂಟೋನಿಯೋ ಗುಟ್ರೆಸ್‌ ತಳ್ಳಿ ಹಾಕಿದ್ದಾರೆ. ಮಂಡಳಿ ಹಕ್ಕುಗಳ ರಕ್ಷಣೆಯಲ್ಲಿ ಪ್ರಧಾನ ಪಾತ್ರ ವಹಿಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.