ಗೋವೂ ಮುಖ್ಯ, ಮನುಷ್ಯರೂ ಮುಖ್ಯ, ಎಲ್ಲರಿಗೂ ರಕ್ಷಣೆ ಇದೆ: CM ಯೋಗಿ
Team Udayavani, Jul 25, 2018, 5:31 PM IST
ಲಕ್ನೋ : “ನಮಗೆ ಮನುಷ್ಯರೂ ಮುಖ್ಯ, ಗೋವುಗಳೂ ಮುಖ್ಯ. ಪ್ರಕೃತಿಯಲ್ಲಿ ಮನುಷ್ಯರಿಗೆ ಮತ್ತು ಗೋವುಗಳಿಗೆ ತಮ್ಮದೇ ಆದ ಪಾತ್ರಗಳಿವೆ; ಆದುದರಿಂದ ಪ್ರತಿಯೊಬ್ಬರಿಗೂ ರಕ್ಷಣೆ ನೀಡಬೇಕಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ದೇಶದಲ್ಲಿ ಗೋ ರಕ್ಷಣೆ ಹೆಸರಲ್ಲಿ ಶಂಕಿತ ಅಮಾಯಕರನ್ನು ಚಚ್ಚಿ ಸಾಯಿಸುವ ಗುಂಪು ಹಿಂಸೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾತನಾಡುತ್ತಿದ್ದ ಅವರು “ಸರಕಾರ ಪ್ರತಿಯೊಬ್ಬರಿಗೂ ರಕ್ಷಣೆ ನೀಡುತ್ತದೆ; ಸಮಾಜದಲ್ಲಿ ಪ್ರತಿಯೊಂದು ಸಮುದಾಯ ಮತ್ತು ಪ್ರತಿಯೊಂದು ಧರ್ಮದ ಜನರಿಗೆ ಪರಸ್ಪರರನ್ನು ಗೌರವಿಸುವ, ಪರಸ್ಪರರ ಭಾವನೆಗಳನ್ನು ಗೌರವಿಸುವ ಹೊಣೆಗಾರಿಕೆ ಇದೆ; ಈ ಹೊಣೆಗಾರಿಕೆಯನ್ನು ಎಲ್ಲರೂ ಏಕಪ್ರಕಾರವಾಗಿ ನಿಭಾಯಿಸಿದಾಗ ಸಮಾಜದಲ್ಲಿ ಶಾಂತಿ, ಸಾಮರಸ್ಯ ತನ್ನಿಂತಾನೆ ನೆಲೆಗೊಳ್ಳುತ್ತದೆ’ ಎಂದು ಹೇಳಿದರು.
ದೇಶದಲ್ಲಿ ನಡೆದಿರುವ ಗುಂಪು ಹಿಂಸೆ ಪ್ರಕರಣಗಳಿಗೆ ಅನಪೇಕ್ಷಿತ ಮಹತ್ವ ನೀಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ ಸಿಎಂ ಯೋಗಿ ಅವರು, “ಗುಂಪು ಹಿಂಸೆ ಬಗ್ಗೆ ಅಷ್ಟೆಲ್ಲ ಮಾತನಾಡುವ ನೀವು 1984ರ ಹಿಂಸೆಯ ಬಗ್ಗೆ ಏನಂತೀರಿ?’ ಎಂದು ಪ್ರಶ್ನಿಸಿದರು.
ಕಾನೂನು ಮತ್ತು ಶಿಸ್ತಿನ ವಿಷಯ ಆಯಾ ರಾಜ್ಯ ಸರಕಾರಗಳಿಗೆ ಸೇರಿದ್ದು; ಅಂತಿರುವಾಗ ಇರುವೆಯನ್ನು ಪರ್ವತ ಮಾಡುತ್ತಿರುವ ಕಾಂಗ್ರೆಸ್‌ನ ಉದ್ದೇಶ ಸಫಲವಾಗದು’ ಎಂದು ಹೇಳಿದರು.
ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ತಬ್ಬಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೃತ್ಯ ಅತ್ಯಂತ ಬಾಲಿಶವಾದದ್ದು ಎಂದು ಯೋಗಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.