ಲಾಕ್‌ಡೌನ್ ಹೆಚ್ಚಿದರೆ ಜನರಿಗೆ ತೊಂದರೆ ; ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಎಚ್ಚರಿಕೆ
Team Udayavani, May 1, 2020, 6:38 AM IST
ದೀರ್ಘಕಾಲದವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದರೆ ದೇಶದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ಕೋವಿಡ್ 19 ವೈರಸ್ ಸಾಂಕ್ರಾಮಿಕಕ್ಕಿಂತಲೂ ಹೆಚ್ಚಾಗಿರುತ್ತದೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಸ್ಥಿತಿಯಲ್ಲೇ ಬಹಳ ದಿನ ಉಳಿದುಕೊಳ್ಳಲು ಸಾಧ್ಯವಿಲ್ಲ ಎಂಬುದು ಸತ್ಯ. ದೇಶದಲ್ಲಿ ಒಟ್ಟಾರೆ ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ, ಸಾವಿನ ಪ್ರಮಾಣ ಶೇ. 0.25-0.5ನಷ್ಟಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಹೋಲಿಸಿದರೆ ಈ ಪ್ರಮಾಣ ಬಹಳ ಕಡಿಮೆ.
ದೇಶದಲ್ಲಿ ಪ್ರತಿವರ್ಷ 90 ಲಕ್ಷ (9 ಮಿಲಿಯನ್) ಮಂದಿ ಬೇರೆ, ಬೇರೆ ಕಾರಣಗಳಿಂದಾಗಿ ಸಾವನ್ನಪ್ಪುತ್ತಾರೆ. ಈ ಪೈಕಿ ಕಾಲು ಭಾಗದಷ್ಟು ಮಂದಿ ಮಾಲಿನ್ಯದ ಕಾರಣದಿಂದಾಗಿ ಸಾವಿಗೆ ಶರಣಾಗುತ್ತಾರೆ. ಏಕೆಂದರೆ, ಭಾರತ, ವಿಶ್ವದ ಅತಿ ಮಾಲಿನ್ಯ ದೇಶಗಳಲ್ಲಿ ಒಂದು ಎಂದು ಹೇಳಿದರು.
2 ತಿಂಗಳ ಅವಧಿಯಲ್ಲಿ ಕೋವಿಡ್ 19 ವೈರಸ್ ಗೆ 1 ಸಾವಿರ ಮಂದಿ ಬಲಿಯಾಗಿದ್ದಾರೆ. ಪ್ರತಿವರ್ಷ ನೈಸರ್ಗಿಕವಾಗಿ ಸಾಯುವ 90 ಲಕ್ಷ ಮಂದಿಗೆ ಹೋಲಿಸಿದರೆ ಈ ಸಂಖ್ಯೆ ನಗಣ್ಯ. ಹಾಗಾಗಿ, ಭಾರತ ಕೋವಿಡ್ 19 ವೈರಸ್ ಅನ್ನು ಹೊಸ ಸಾಮಾನ್ಯ ಸಂಕಷ್ಟ ಎಂದು ಪರಿಗಣಿಸಿ, ದುರ್ಬಲರನ್ನು ರಕ್ಷಿಸಿ, ದೈಹಿಕವಾಗಿ ಸಮರ್ಥರಾಗಿರುವವರಿಗೆ ಕೆಲಸಕ್ಕೆ ಮರಳಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಸುಮಾರು 19 ಕೋಟಿ ಭಾರತೀಯರು ಅಸಂಘಟಿಕ ವಲಯದಲ್ಲಿಇಲ್ಲವೇ ಸ್ವಯಂ ಉದ್ಯೋಗದಲ್ಲಿ ನಿರತರಾಗಿದ್ದಾರೆ. ಬಹುತೇಕ ಉದ್ಯಮಗಳು ತಮ್ಮ ವ್ಯಾಪಾರದ ಶೇ. 15-20ರಷ್ಟು ಆದಾಯವನ್ನು ಕಳೆದುಕೊಂಡಿವೆ. ಇದರಿಂದಾಗಿ ಸರಕಾರದ ಬೊಕ್ಕಸಕ್ಕೆ ಬರುತ್ತಿದ್ದ ಆದಾಯ ಕೂಡ ಕಡಿಮೆಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.