200 ಭಾರತೀಯ ವಿದ್ಯಾರ್ಥಿಗಳು ಸಂಕಷ್ಟದಲ್ಲಿ
Team Udayavani, Aug 29, 2017, 6:55 AM IST
ಹೊಸದಿಲ್ಲಿ /ಹ್ಯೂಸ್ಟನ್: ಕಳೆದ 13 ವರ್ಷಗಳಲ್ಲೇ ಅತಿ ಭೀಕರ ಚಂಡಮಾರುತವು ಅಮೆರಿಕಕ್ಕೆ ಅಪ್ಪಳಿಸಿದ್ದು, ಈಗಾಗಲೇ ಐವರನ್ನು ಬಲಿಪಡೆದಿದೆ. “ಹಾರ್ವೆ’ ಚಂಡಮಾರುತದ ಅಬ್ಬರದಿಂದಾಗಿ ಟೆಕ್ಸಾಸ್ ನಗರವು ಜಲಾವೃತ ವಾಗಿದ್ದು, ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ಸುಮಾರು 200 ಮಂದಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೇ ಟ್ವಿಟರ್ ಮೂಲಕ ಈ ಮಾಹಿತಿ ನೀಡಿದ್ದಾರೆ. ಶಾಲಿನಿ ಮತ್ತು ನಿಖೀಲ್ ಭಾಟಿಯಾ ಎಂಬ ಇಬ್ಬರು ವಿದ್ಯಾರ್ಥಿಗಳಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ನೆರವಿಗೆ ಧಾವಿಸಿದ್ದಾರೆ ಎಂದು ಸುಷ್ಮಾ ಮಾಹಿತಿ ನೀಡಿದ್ದಾರೆ. 200ರಷ್ಟು ಭಾರತೀಯ ವಿದ್ಯಾರ್ಥಿಗಳ ನೀರಲ್ಲಿ ಮುಳುಗುವ ಸ್ಥಿತಿಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಪೂರೈಸಲು ಭಾರತೀಯ ರಾಯಭಾರ ಕಚೇರಿ ಯತ್ನಿಸಿತಾದರೂ, ಅದಕ್ಕೆ ಅಮೆರಿಕ ಕರಾವಳಿ ರಕ್ಷಕ ಪಡೆ ಅವಕಾಶ ನೀಡಲಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಬೋಟ್ಗಳ ಕೊರತೆಯ ನೆಪ ಹೇಳುತ್ತಿದ್ದಾರೆ ಎಂದೂ ಸಚಿವೆ ಸುಷ್ಮಾ ಹೇಳಿದ್ದಾರೆ. ಇದೇ ವೇಳೆ, ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಮಂಗಳವಾರ ಪ್ರವಾಹ ಪೀಡಿತ ಟೆಕ್ಸಾಸ್ಗೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.