ಪತಿ ಮರ್ಮಾಂಗ ಕತ್ತರಿಸಿದಳು!
Team Udayavani, Jul 22, 2017, 7:05 AM IST
ವೆಲ್ಲೋರ್: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ತನ್ನ ಶೀಲ ಶಂಕಿಸಿದ ಪತಿಯ ಮರ್ಮಾಂಗ ಕತ್ತರಿಸಿ, ಅದನ್ನು ತವರು ಮನೆಗೆ ಕೊಂಡೊಯ್ಯುತ್ತಿದ್ದ ಮಹಿಳೆಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. “ಪತಿಯ ಮರ್ಮಾಂಗವನ್ನು ಕತ್ತರಿಸಿ, ಅದನ್ನು ಪರ್ಸ್‌ನಲ್ಲಿರಿಸಿಕೊಂಡು ಹೊರಟಿದ್ದ ಮಹಿಳೆಯನ್ನು ಥೂತಿಪಟ್ಟು ಬಳಿ ಬಂಧಿಸಿ, ಕತ್ತರಿಸಿದ ಮರ್ಮಾಂಗವನ್ನು ವಶಕ್ಕೆ ಪಡೆದಿದ್ದೇವೆ,’ ಎಂದು ಗುಡಿಯಟ್ಟಮ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮಹಿಳೆ ಸರಸು ಮತ್ತು ಜಗದೀಶನ್ ಒಂದೇ ಗಾರ್ಮೆಂಟ್ಸ್‌ನಲ್ಲಿ ದುಡಿಯುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೀತಿ ಶುರುವಾಗಿ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಬ್ಬ ಮಗ, ಮೂವರು ಹೆಣ್ಣುಮಕ್ಕಳಿದ್ದಾರೆ. ಆದರೆ ಕೌಟುಂಬಿಕ ಕಲಹದಿಂದಾಗಿ ವರ್ಷದ ಹಿಂದೆ ಪತಿಯಿಂದ ದೂರಾದ ಸರಸು, ತವರು ಮನೆ ಸೇರಿದ್ದರು. ಕಡೆಗೆ ಪುತ್ರನ ಕೋರಿಕೆ ಮೇರೆಗೆ ಮತ್ತೆ ಬಂದು ಪತಿ ಜತೆ ವಾಸವಿದ್ದರು. ಗುರುವಾರ ರಾತ್ರಿ ಕೋಪದಲ್ಲೇ ಮನೆಗೆ ಬಂದ ಜಗದೀಶನ್, ತವರು ಮನೆಯಲ್ಲಿದ್ದಾಗ ಸರಸು ಬೇರೊಬ್ಬ ವ್ಯಕ್ತಿ ಜತೆ ಸಂಬಂಧ ಹೊಂದಿದ್ದ ಬಗ್ಗೆ ಶಂಕಿಸಿದ್ದಾನೆ. ಅಲ್ಲದೆ, “ನಿನಗೆ ವಯಸ್ಸಾಗಿರುವ ಕಾರಣ ನಾನು ಮತ್ತೂಂದು ಮದುವೆಯಾಗುತ್ತೇನೆ,’ ಎಂದಿದ್ದಾನೆ.
ಈ ಮೂಲಕ ಇಬ್ಬರ ನಡುವೆ ಶುರುವಾದ ಜಗಳ, ನಸುಕಿನ 2 ಗಂಟೆವರೆಗೂ ಮುಂದು ವರಿದಿದೆ. ನಂತರ ಜಗದೀಶನ್ ಮಲಗಿದ್ದಾನೆ. ಈ ವೇಳೆ ಅಡುಗೆ ಮನೆಯಿಂದ ಚಾಕು ತೆಗೆ ದು ಕೊಂಡು ಬಂದ ಸರಸು, ಪತಿಯ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ಆಕ್ರಂದನ ಕೇಳಿಸಿಕೊಂಡ ನೆರೆಮನೆಯವ ರಿಂದ ಮಾಹಿತಿ ಪಡೆದ ಪೊಲೀಸರು, ತವರಿಗೆ ಹೊರಟಿದ್ದ ಸರಸುಳನ್ನು ಮಾರ್ಗಮಧ್ಯೆ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.