ಬೆಚ್ಚಿ ಬೀಳಿಸುವ ಘಟನೆ: ಭಿಕ್ಷೆ ಬೇಡುವಂತೆ ನಟಿಸಿ TDP ನಾಯಕನ ಮೇಲೆ ಮಾರಾಕಾಸ್ತ್ರದಿಂದ ದಾಳಿ
Team Udayavani, Nov 17, 2022, 1:21 PM IST
ಹೈದರಾಬಾದ್ : ಭಿಕ್ಷೆ ಬೇಡುವಂತೆ ನಟಿಸಿ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ತನ್ನಲ್ಲಿದ್ದ ಹರಿತವಾದ ಆಯುಧದಿಂದ ಟಿಡಿಪಿ ನಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಘಟನೆಯಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೋಲ್ನಾಟಿ ಶೇಷಗಿರಿ ರಾವ್ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಂಧ್ರಪ್ರದೇಶದ ತುಲಿಯಲ್ಲಿರುವ ಪೋಲ್ನಾಟಿ ಶೇಷಗಿರಿ ರಾವ್ ಅವರ ಮನೆಗೆ ಭಿಕ್ಷೆ ಬೇಡುವ ರೀತಿಯಲ್ಲಿ ವೇಷ ಧರಿಸಿಕೊಂಡು ಬಂದ ವ್ಯಕ್ತಿ ಶೇಷಗಿರಿ ಅವರಲ್ಲಿ ಭಿಕ್ಷೆ ಕೇಳಿದ್ದಾನೆ ಅದರಂತೆ ನಾಯಕ ಮನೆಯಲ್ಲಿದ್ದ ಅಕ್ಕಿ ತಂದು ವ್ಯಕ್ತಿಯ ಜೋಳಿಗೆಗೆ ಸುರಿಯುವ ವೇಳೆ ತನ್ನಲ್ಲಿದ್ದ ಹರಿತವಾದ ಕತ್ತಿಯಿಂದ ಶೇಷಗಿರಿ ರಾವ್ ಅವರ ಮೇಲೆ ದಾಳಿ ನಡೆಸಿ ಮನೆಯ ಹೊರಗೆ ಬೈಕ್ ನಲ್ಲಿ ನಿಂತ್ತಿದ್ದ ಇನ್ನೋರ್ವ ಸಹಚರನ ಜೊತೆ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿಯ ದೃಶ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದಾಳಿಯಲ್ಲಿ ಶೇಷಗಿರಿ ರಾವ್ ಅವರ ತಲೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಕಾಕಿನಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ : ವಿಡಿಯೋ: ಚಾಲಕನ ಅಶ್ಲೀಲ ಪ್ರಶ್ನೆಗೆ ಹೆದರಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಬಾಲಕಿ ಗಂಭೀರ
Cinematic attack caught on camera in #Tuni #Kakinada #AndhraPradesh … Attacker came dressed as holyman, seeking alms, suddenly took out weapon and attacked #TeluguDesam leader #PolnatiSheshagiriRao on head & neck, grievously injuring him, then escaped on bike @ndtv @ndtvindia pic.twitter.com/BisGrR2FhN
— Uma Sudhir (@umasudhir) November 17, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.