ಪುಣೆಯಲ್ಲಿ ಲಸಿಕೆ ಉತ್ಪಾದಿಸಲಿದೆ ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್..!
Team Udayavani, May 14, 2021, 8:33 PM IST
ಪ್ರಾತಿನಿಧಿಕ ಚಿತ್ರ
ಮಹಾರಾಷ್ಟ್ರ : ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್, ಅಂಗಸಂಸ್ಥೆ ಬಯೋವೆಟ್ ಪ್ರೈವೇಟ್ ಲಿಮಿಟೆಡ್ ಮೂಲಕ ಶೀಘ್ರದಲ್ಲೇ ಪುಣೆಯಲ್ಲಿ ಕೋವಿಡ್ -19 ಲಸಿಕೆಗಳನ್ನು ಉತ್ಪಾದಿಸಲು ಪ್ರಾರಂಭಿಸಲಿದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶುಕ್ರವಾರ (ಮೇ 14) ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಾರ್, ಪುಣೆಯಲ್ಲಿ ಲಸಿಕೆಗಳ ಉತ್ಪಾದನೆಯನ್ನು ಪ್ರಾರಂಭಿಸಲು ಸುಮಾರು ಮೂರು ತಿಂಗಳುಗಳು ಬೇಕಾಗಬಹುದು ಎಂದು ತಿಳಿಸಿದ್ದಾರೆ.
ಕೇಂದ್ರದೊಂದಿಗಿನ ಒಪ್ಪಂದ ಪೂರೈಸಿದ ನಂತರ ಮಹಾರಾಷ್ಟ್ರಕ್ಕೆ ಲಸಿಕೆಗಳನ್ನು ಪೂರೈಸಲು ಆದ್ಯತೆ ನೀಡುವಂತೆ ರಾಜ್ಯವು ಬಿಬಿಐಎಲ್ ಗೆ ಕೇಳಿಕೊಂಡಿದೆ ಎಂದು ಕೂಡ ಅವರು ಹೇಳಿದ್ದಾರೆ.
ಇದನ್ನೂ ಓದಿ : ಯುವತಿಯ ಅನುಮಾನಾಸ್ಪದ ಸಾವು, ಕೊಲೆ ಶಂಕೆ : ಪೊಲೀಸರಿಂದ ತೀವ್ರ ವಿಚಾರಣೆ
ಇನ್ನು, ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ತ್ ಮತ್ತು ಕಲೆಕ್ಟರ್ ರಾಜೇಶ್ ದೇಶ್ಮುಖ್ ಅವರು ಮಂಜರಿ ಖುರ್ದ್ ನ 11 ಎಕರೆ ಹೆಚ್ಚಿರುವ ಪ್ರದೇಶವನ್ನು ಪರಿಶೀಲಿಸಿದ ಒಂದೆರಡು ದಿನಗಳ ನಂತರ ಈ ಬೆಳವಣಿಗೆ ಕಂಡಿದೆ. ಮಹಾರಾಷ್ಟ್ರ ಸರ್ಕಾರವು ಪುಣೆಯಲ್ಲಿ ಬೇಕಾದ ಸೌಲಭ್ಯವನ್ನು ಹಸ್ತಾಂತರಿಸಬೇಕೆಂದು ಕೋರಿ ಕರ್ನಾಟಕ ಮೂಲದ ಬಯೋವೆಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿ ಕೆ. ಕೆ. ಟೇಟ್ ಮತ್ತು ನ್ಯಾಯಮೂರ್ತಿ ನಿತಿನ್ ಬೋರ್ಕರ್ ಅವರನ್ನೊಳಗೊಂಡ ಬಾಂಬೆ ಹೈಕೋರ್ಟ್ ಪೀಠ ಎತ್ತಿ ಹಿಡಿದಿದೆ.
ಫುಡ್ ಮತ್ತು ಮೌತ್ ಡಿಸೀಸ್ ಗೆ ಲಸಿಕೆಗಳನ್ನು ತಯಾರಿಸಲು 1973 ರಲ್ಲಿ ಖಾಸಗಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರವು ನೀಡಿದ ಭೂಮಿಯಲ್ಲಿ ಮಂಜರಿ ಖುರ್ದ್ ಸೌಲಭ್ಯವನ್ನು ನೀಡಿತ್ತು.
ಆದಾಗ್ಯೂ, ಆ ಕಂಪನಿಯು ಇಲ್ಲಿ ತನ್ನ ಕಾರ್ಯಾಚರಣೆಯನ್ನು ತ್ಯಜಿಸಿ, ಬಯೋವೆಟ್ ಪ್ರೈವೇಟ್ ಲಿಮಿಟೆಡ್ ನೊಂದಿಗೆ ಭೂಮಿ ಮತ್ತು ಸ್ಥಾವರವನ್ನು ವರ್ಗಾವಣೆ ಮಾಡಲು ಒಪ್ಪಂದ ಮಾಡಿಕೊಂಡಿತ್ತು, ಇದನ್ನು ಮಹಾರಾಷ್ಟ್ರ ಅರಣ್ಯ ಇಲಾಖೆ ಆಕ್ಷೇಪಿಸಿತ್ತು.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು, ಮುಂದಿನ 3-4 ತಿಂಗಳಲ್ಲಿ ಲಸಿಕೆಗಳನ್ನು ಉತ್ಪಾದಿಸಲು ಪ್ರಾರಂಭಿಸಬಹುದು, ಆದರೇ, ಯಾವ ಪ್ರಮಾಣದಲ್ಲಿ ಉತ್ಪಾದನೆ ಮಾಡಲಿದೆ ಎನ್ನುವುದರ ಬಗ್ಗೆ ತಿಳಿದುಬಂದಿಲ್ಲ ಎಂದಿದ್ದಾರೆ.
ಇನ್ನು, ಬಯೋವೆಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಪ್ರಸ್ತುತ ಅಲ್ಲಿ ಉತ್ಪಾದನಾ ಮಾರ್ಗ ಮತ್ತು ಪ್ರಕ್ರಿಯೆಗಳನ್ನು ಪರಿಶೀಲಿಸುತ್ತಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ : ಕೋಲಾರದ ಮಾಲೂರಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.