Hyderabad: ಗಂಡನ ಅಕ್ರಮ ಸಂಬಂಧ; ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ
Team Udayavani, Jun 24, 2023, 9:29 AM IST
ಹೈದರಾಬಾದ್: ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ.
ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್ ಎನ್ನುವವರನ್ನು ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಹೇಮಂತ್ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದರು. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್ ಬುಕ್ ಲೈವ್ ನಲ್ಲೇ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರು ಗಂಡನ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.
ಪ್ರಸ್ತುತ ಹೇಮಂತ್ ಡಿಜೆ ಆಗಿ ಕೆಲಸ ಮಾಡುತ್ತಿದ್ದು, ಈ ವೇಳೆ ಡಿಜೆಯಾಗಿರುವ ಯುವತಿಯೊಂದಿಗೆ ಹೇಮಂತ್ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದಾರೆ. ಹೇಮಂತ್ ಸನಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಅವರ ಅಕ್ರಮ ಸಂಬಂಧವೇ ಈ ಘಟನೆಗೆ ಕಾರಣವೆಂದು ಮೃತ ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ.
ಸದ್ಯ ಹೇಮಂತ್ ಹಾಗೂ ಆತನ ಪೋಷಕರ ವಿರುದ್ಧ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಾಚಾರಂ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.