ಬ್ಯಾನ್ ಆದರೂ ವಿವಿ ಕ್ಯಾಂಪಸ್ ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಿದ ವಿದ್ಯಾರ್ಥಿಗಳು
Team Udayavani, Jan 24, 2023, 9:12 AM IST
ಹೈದರಾಬಾದ್: ಪ್ರಧಾನಿ ಮೋದಿ ಕುರಿತಂತೆ ಬಿಬಿಸಿ ವಾಹಿನಿ ನಿರ್ಮಿಸಿರುವ ಸಾಕ್ಷ್ಯಚಿತ್ರ ವಿವಾದಕ್ಕೆ ತಿರುಗಿದ್ದು, ಭಾರತದಲ್ಲಿ ಬಿಬಿಸಿ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್ ನಿಂದ ನಿರ್ಬಂಧಿಸಿದೆ.
ಈ ನಡುವೆ ಹೈದರಾಬಾದ್ ವಿವಿ ಕ್ಯಾಂಪಸ್ ನಲ್ಲಿ ವಿವಾದಿತ ಸಾಕ್ಷ್ಯ ಚಿತ್ರ ʼ ಇಂಡಿಯಾ: ದಿ ಮೋದಿ ಕ್ವೆಶ್ಚನ್ʼ ಪ್ರದರ್ಶನ ಮಾಡಿದ್ದಾರೆ. ಕೆಲ ವಿದ್ಯಾರ್ಥಿಗಳ ಗುಂಪು ಸಾಕ್ಷ್ಯ ಚಿತ್ರವನ್ನು ಸ್ಕ್ರೀನಿಂಗ್ ಮಾಡಿದ್ದು, ಇದರ ವಿರುದ್ಧ ಎಬಿವಿಪಿ ಸಂಘಟನೆ ಕಾಲೇಜಿನ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ ಟಿ20 ತಂಡದಲ್ಲಿ ಯಾಕಿಲ್ಲ? ಕೋಚ್ ದ್ರಾವಿಡ್ ಉತ್ತರ ನೋಡಿ
ಸಾಕ್ಷ್ಯ ಚಿತ್ರದಲ್ಲಿ ಮೋದಿ ಗುಜರಾತಿನಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಉಂಟಾಗಿದ್ದ ಗಲಭೆಯ ತುಣುಕನ್ನು ಮೋದಿಗೆ ಅಪ್ರಪಚಾರವಾಗುವಂತೆ ತೋರಿಸಲಾಗಿದೆ ಎನ್ನುವ ಆರೋಪವನ್ನು ಕೇಂದ್ರ ಮಾಡಿದೆ. ಇದೇ ಕಾರಣದಿಂದ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಯೂಟ್ಯೂಬ್ ನಿಂದ ತೆಗೆದು ಹಾಕಿದೆ.
ಇನ್ನೊಂದೆಡೆ ವಿದ್ಯಾರ್ಥಿಗಳ ಗುಂಪು ನಾವೇನು ತಪ್ಪು ಅಥವಾ ಅಕ್ರಮ ಎಸಗಿಲ್ಲ ಎಂದಿದೆ. ಈ ಘಟನೆ ಕುರಿತು ವಿಶ್ವವಿದ್ಯಾಲಯ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ಪ್ಯಾನ್ ಆಗುವ ಎರಡು ದಿನ ಮೊದಲೇ ಸ್ಕ್ರೀನಿಂಗ್ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದರು ಎಂದಿದೆ.
ಇದುವರೆಗೆ ಈ ಘಟನೆ ಕುರಿತು ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.