ಹ್ಯುಂಡೈನಿಂದ ರಸ್ತೆ ಸುರಕ್ಷತಾ ಸಪ್ತಾಹ
Team Udayavani, Apr 25, 2018, 11:39 AM IST
ನವದೆಹಲಿ: ದೇಶದ 2ನೇ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆ ಹ್ಯುಂಡೈ ಮೋಟಾರ್ ಇಂಡಿಯಾ ಏ.23ರಿಂದ 30ರವರೆಗೆ ದೇಶಾದ್ಯಂತ ರಸ್ತೆ ಸುರಕ್ಷಾ ಸಪ್ತಾಹ ಹಮ್ಮಿಕೊಂಡಿದೆ. ಸಪ್ತಾಹದಲ್ಲಿ ರಸ್ತೆ ಸುರಕ್ಷತೆ ಉಪಕ್ರಮಗಳು, ಟ್ರಾಫಿಕ್ ನಿಯಮಗಳು ಹಾಗೂ ಸುರಕ್ಷಿತ ಚಾಲನಾ ಪದ್ಧತಿಯನ್ನು ಉತ್ತೇಜಿಸುವ ಗುರಿ ಸಂಸ್ಥೆಯದಾಗಿದೆ.
ಈ ಸಂದರ್ಭದಲ್ಲಿ ಹ್ಯುಂಡೈ ಮೋಟಾರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವೈ.ಕೆ. ಕೂØ ಮಾತನಾಡಿ, ಹ್ಯುಂಡೈ ಸಾಮಾಜಿಕ ಜವಾಬ್ದಾರಿಯುಳ್ಳ ಸಂಸ್ಥೆಯಾಗಿದೆ. ಒಂದು ವಾರ ಕಾಲ ನಮ್ಮ ಎಲ್ಲ 1300 ವರ್ಕ್‌ಶಾಪ್‌ಗ್ಳಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ.
ಈ ಕಾರ್ಯವನ್ನು 2015ರಿಂದಲೂ ಮಾಡುತ್ತಾ ಬಂದಿದೆ. ರಸ್ತೆ ಸುರಕ್ಷತಾ ಜ್ಞಾನವು ಜೀವನದ ಒಂದು ಪ್ರಮುಖ ಕೌಶಲ್ಯವಾಗಿದೆ. ಇದನ್ನು ಮಕ್ಕಳು, ಯುವಕರು ಸೇರಿದಂತೆ ಎಲ್ಲರಿಗೂ ತಿಳಿಯಪಡಿಸುವ ಮೂಲಕ ರಸ್ತೆ ಮತ್ತು ಚಾಲನಾ ನಡವಳಿಕೆಗಳ ಬಗ್ಗೆ ಜಾಗೃತಿ ಉಂಟುಮಾಡುವುದು ಕಾರ್ಯಕ್ರಮದ ಉದ್ದೇಶ ಎಂದರು.
ಮಕ್ಕಳಿಗೆ ಸ್ಪರ್ಧೆ: ವಾರಾಂತ್ಯದವರೆಗೆ ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳು, ವಸತಿ ಸಮುದಾಯಗಳ ಬಳಿ ಹ್ಯುಂಡೈ ಮಾರಾಟ ಮತ್ತು ಸರ್ವೀಸ್ ಶಿಬಿರ ಆಯೋಜಿಸುತ್ತಿದ್ದು, ಇದೇ ವೇಳೆ ಮಕ್ಕಳಿಗೆ ಸಂಚಾರ ಸುರಕ್ಷತೆ ವಿಷಯದ ಬಗ್ಗೆ ಚಿತ್ರಕಲೆ ಮತ್ತು ಸ್ಲೋಗನ್ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಅಲ್ಲದೆ, ಸಪ್ತಾಹದ ಅವಧಿಯಲ್ಲಿ ಗ್ರಾಹಕರು ತಮ್ಮ ಹ್ಯುಂಡೈ ಕಾರನ್ನು 20 ಪಾಯಿಂಟ್ ಸೇಫ್ಟಿ ಚೆಕ್ ಅಪ್ ಮಾಡಿಸಿಕೊಳ್ಳುವ ಅವಕಾಶಕ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.