ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್
ಆಪ್ ಸಿಎಂ ಅಭ್ಯರ್ಥಿ ಮನ್ನ ಘೋಷಣೆ
Team Udayavani, Jan 18, 2022, 6:16 PM IST
ಪಂಜಾಬ್:ನಾನೊಬ್ಬ ಯೋಧ, ಪಂಜಾಬಿನ ಗತವೈಭವವನ್ನು ಮರಳಿ ಸ್ಥಾಪಿಸುವುದುದೇ ನನ್ನ ಗುರಿ ಎಂದು ಪಂಜಾಬ್ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿರುವ ಭಗವಂತ ಮಾನ್ ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂದು ಆಮ್ ಆದ್ಮಿ ಪಕ್ಷ ಜನತಾ ಸರ್ವೆ ನಡೆಸಿತ್ತು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಗವಂತ ಮಾನ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು, ಪಂಜಾಬ್ ಪುನರುತ್ಥಾನದ ಕನಸು ಬಿಚ್ಚಿಟ್ಟಿದ್ದಾರೆ.
ರಾಜಕೀಯ ಪ್ರವೇಶದ ಬಳಿಕ ನನ್ನ ಬದುಕೇ ಬದಲಾಗಿದೆ. ಈ ಹಿಂದೆ ನಾನು ಕಾಮಿಡಿ ಮಾಡುತ್ತಿದ್ದಾಗ ಜನ ನನ್ನತ್ತ ನಗೆ ಬೀರುತ್ತಿದ್ದರು. ಈಗ ನನ್ನತ್ತ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ನಮ್ಮ ರಕ್ಷಣೆ ಹೊಣೆ ನಿನ್ನದು ಎಂಬ ಭಾವ ಅವರ ನೋಟದಲ್ಲಿದೆ. ಭಗವಂತ ಸರ್ವ ರಕ್ಷಕ. ನಾನು ಕೇವಲ ಮಾಧ್ಯಮ ಮಾತ್ರ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಂಜಾಬ್‌ನ ಗತ ವೈಭವವನ್ನು ಮರಳಿ ಸ್ಥಾಪಿಸುವುದು ನನ್ನ ಗುರಿ. ನಾನೊಬ್ಬ ಯೋಧ. ಗುರಿ ಸಾಧನೆಯಲ್ಲಿ ಎಂದಿಗೂ ಹಿಂದೆ ಬೀಳುವುದಿಲ್ಲ ಎಂದು ಹೇಳಿದ್ದಾರೆ.ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿ ಹೆಸರು ಮಾಡಿದ್ದ ಮಾನ್ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯ ಪಾದಾರ್ಪಣೆ ಮಾಡಿದ್ದರು. ಜನರಿಂದಲೇ ಸಿಎಂ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವ ಅವರಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈಗಾಗಲೇ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.