‘ನಾನು ಪ್ರಧಾನ ಮಂತ್ರಿ ರೇಸ್ ನಲ್ಲಿಲ್ಲ’: ನಿತಿನ್ ಗಡ್ಕರಿ
Team Udayavani, Mar 10, 2019, 11:32 AM IST
ನವದೆಹಲಿ: ಒಂದುವೇಳೆ ಮುಂಬರುವ ಲೋಕಸಭಾ ಚುನಾವಣೆಯ ಬಳಿಕ ಅತಂತ್ರ ಪರಿಸ್ಥಿತಿ ಸೃಷ್ಟಿಯಾದ ಪಕ್ಷದಲ್ಲಿ ನರೇಂದ್ರ ಮೋದಿಯವರ ಬದಲಿಗೆ ನಿತಿನ್ ಗಡ್ಕರಿ ಅವರು ಎನ್.ಡಿ.ಎ. ಮಿತ್ರಪಕ್ಷಗಳ ಒಮ್ಮತದ ಪ್ರಧಾನಿ ಅಭ್ಯರ್ಥಿಯಾಗಬಹುದು ಎಂಬ ವಾದ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಆದರೆ ಈ ಗುಸುಗುಸುಗಳಿಗೆ ಸ್ಪಷ್ಟ ಉತ್ತರವನ್ನು ನೀಡಿರುವ ಕೇಂದ್ರದ ಪ್ರಭಾವಿ ಸಚಿವರಲ್ಲೊಬ್ಬರಾಗಿರುವ ನಿತಿನ್ ಗಡ್ಕರಿಯವರು, ‘ತಾವು ಎಂದೂ ಪ್ರಧಾನಿಯಾಗುವ ಕನಸನ್ನು ಕಂಡವನಲ್ಲ ಮತ್ತು ನಾನು ಪ್ರಧಾನಿ ರೇಸ್ ನಲ್ಲೂ ಇಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ‘ರಾಜಕೀಯದಲ್ಲಾಗಲೀ, ಕೆಲಸದಲ್ಲಾಗಲೀ ನಾನೆಂದೂ ಲೆಕ್ಕಾಚಾರ ಹಾಕಿ ಕೆಲಸ ಮಾಡಿದವನಲ್ಲ, ಮತ್ತು ಎಂದೂ ಗುರಿಯಿರಿಸಿಕೊಂಡವನಲ್ಲ. ದಾರಿಯೆಲ್ಲಿಗೆ ಸಾಗುತ್ತದೆಯೋ ಆ ಕಡೆಗೆ ಸಾಗುತ್ತಾ ಬಂದವ ನಾನು, ನನ್ನ ಕಣ್ಣಿಗೆ ಬಿದ್ದ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಾ ಬಂದವನು, ಮತ್ತು ಆ ಮೂಲಕ ದೇಶಕ್ಕೆ ಉತ್ತಮವಾದುದನ್ನೇ ನೀಡುವುದರಲ್ಲಿ ನಂಬಿಕೆ ಇಟ್ಟವನು’ ಎಂದು ಪಿಟಿಐ ಸುದ್ಧಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಿತಿನ್ ಗಡ್ಕರಿ ಅವರು ತಿಳಿಸಿದರು.
‘ಪ್ರಧಾನ ಮಂತ್ರಿ ಪಟ್ಟಕ್ಕೆ ನನ್ನ ಅಭ್ಯರ್ಥಿತನದ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಮನಸ್ಸಿನಲ್ಲಾಗಲೀ ಅಥವಾ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯ ವಲಯದಲ್ಲಾಗಲೀ ಅಂತಹ ಯಾವುದೇ ವಿಚಾರಗಳಿಲ್ಲ ಎಂಬುದನ್ನು ಬಿ.ಜೆ.ಪಿ.ಯ ಈ ಹಿರಿಯ ನಾಯಕ ಸ್ಪಷ್ಟಪಡಿಸಿದರು. ‘ನಾನು ಯಾವುದೇ ರೀತಿಯಲ್ಲಿ ಕನಸು ಕಾಣುವ ವ್ಯಕ್ತಿಯಲ್ಲ, ವಶೀಲಿ ಬಾಜಿ ಮಾಡಲೂ ನನಗೆ ತಿಳಿದಿಲ್ಲ.. ಮತ್ತಿದನ್ನು ನಾನು ನನ್ನ ಹೃದಯದಿಂದ ಹೇಳುತ್ತಿದ್ದೇನೆ’ ಎಂದು ಗಡ್ಕರಿ ತಿಳಿಸುವ ಮೂಲಕ ಎನ್.ಡಿ.ಎ. ಮಿತ್ರಪಕ್ಷಗಳ ಮುಂದಿನ ಪ್ರಧಾನಿ ಅಭ್ಯರ್ಥಿ ಕುರಿತಾಗಿ ರಾಜಕೀಯ ವಲಯದಲ್ಲಿ ಎದ್ದಿರುವ ಸಂಶಯಗಳಿಗೆ ಸ್ಪಷ್ಟ ತೆರೆ ಎಳೆಯುವ ಪ್ರಯತ್ನವನ್ನು ಸಚಿವ ಗಡ್ಕರಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.