ಎಂಜಿಆರ್ ಮಾದರಿ ಆಡಳಿತ ಕೊಡುವೆ: ಸೂಪರ್‌ಸ್ಟಾರ್ ರಜನಿಕಾಂತ್
Team Udayavani, Mar 6, 2018, 7:30 AM IST
ಚೆನ್ನೈ: “ನಾನು ಎಂ.ಜಿ. ರಾಮಚಂದ್ರನ್ ಅಲ್ಲ. ಆದರೆ ಅವರಂತೆ ಬಡವರ ಪರವಾಗಿರುವ ಆಡಳಿತ ನೀಡಬಲ್ಲೆ’.
ಹೀಗೆಂದು ಘೋಷಣೆ ಮಾಡಿದ್ದು ತಮಿಳು ಸೂಪರ್‌ಸ್ಟಾರ್ ರಜನಿಕಾಂತ್. ಚೆನ್ನೈನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್‌ರ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು. ಇನ್ನು ಒಂದು ಸಾವಿರ ವರ್ಷ ಕಳೆದರೂ ತಮಿಳುನಾಡಿನಲ್ಲಿ ಅವರನ್ನು ಮೀರಿಸುವವರು ಇಲ್ಲ. ನಾನೂ ಅದಕ್ಕೆ ಹೊರತಾಗಿಲ್ಲ. ನಾನು ಎಂಜಿಆರ್ ಎಂದರೆ ಅದು ಹಾಸ್ಯಾಸ್ಪದವಾದೀತು ಎಂದು ಹೇಳಿದರು. ಎಂ.ಜಿ.ರಾಮಚಂದ್ರನ್ ತಮಿಳು ಚಿತ್ರರಂಗದಿಂದ ರಾಜಕೀಯ ಪ್ರವೇಶ ಮಾಡಿ ಯಶಸ್ಸು ಕಂಡಂತೆ ಇತರರಿಗೆ ಆ ಸಾಧನೆ ಮಾಡಲು ಸಾಧ್ಯವಿಲ್ಲವೆಂಬ ಆಡಳಿತಾರೂಢ ಎಐಎಡಿಎಂಕೆ ನಾಯಕರು ಮಾಡಿದ ಟೀಕೆಗೆ ಪ್ರತಿಯಾಗಿ ತಲೈವಾ ಈ ಮಾತುಗಳನ್ನಾಡಿದ್ದಾರೆ. ಬಡವರಿಗೆ ಅನುಕೂಲವಾಗುವ ಸರಕಾರ ಮಾಡುವ ಕನಸು ತಮ್ಮದು ಎಂದಿದ್ದಾರೆ. “ಈಗಿನ ಸರಕಾರ ಸರಿಯಾಗಿ ತನ್ನ ಕರ್ತವ್ಯ ಮಾಡುತ್ತಿಲ್ಲ. ನನಗೆ 67 ವರ್ಷ ವಯಸ್ಸಾಯಿತು. ಜಯಲಲಿತಾ ಅವರು ಇಲ್ಲ. ಕರುಣಾನಿಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ತಮಿಳುನಾಡಿನಲ್ಲಿ ಪ್ರಮುಖ ನಾಯಕನ ಕೊರತೆ ಇದೆ. ನಾಯಕರು ಇಲ್ಲವೆಂಬ ಕೊರತೆ ನೀಗಲು ಬಂದಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.
ಬ್ಯಾನರ್‌ಗೆ ಆಕ್ಷೇಪ: ತಮ್ಮ ಬೆಂಬಲಿಗರು ಬ್ಯಾನರ್‌ಗಳನ್ನು ಕಟ್ಟಿ, ಸಾರ್ವಜನಿಕರಿಗೆ ಸಿಹಿ ಹಂಚಿದಕ್ಕೆ ಆಕ್ಷೇಪಿಸಿದ ಸೂಪರ್‌ಸ್ಟಾರ್, ಇದು ಮದ್ರಾಸ್ ಹೈಕೋರ್ಟ್ ಆದೇಶದ ಉಲ್ಲಂಘನೆ. ಮುಂದೆ ಹೀಗೆ ಮಾಡಬೇಡಿ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.