Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
Team Udayavani, Nov 27, 2024, 6:12 AM IST
ನವದೆಹಲಿ: “ನಾನು ಇಲ್ಲಿಯವರೆಗೆ ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಿದ್ದೇನೆ. ಯಾರದ್ದೇ ಅಧಿಕಾರ ವ್ಯಾಪ್ತಿಯಲ್ಲಿ ಅತಿಕ್ರಮ ಪ್ರವೇಶ ಮಾಡಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಸಂವಿಧಾನ ಪುಸ್ತಕವೇ ಮಾರ್ಗದರ್ಶಕ ವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂಬ ವಿಪಕ್ಷಗಳ ಆರೋಪದ ನಡುವೆಯೇ ಪ್ರಧಾನಿ ಮಾತು ಮಹತ್ವ ಪಡೆದುಕೊಂಡಿದೆ.
“ನಾನು ನನ್ನ ಕೆಲವನ್ನು ಸಂವಿಧಾನದ ಚೌಕಟ್ಟಿನ ಹೊರ ಹೋಗಲು ಬಿಟ್ಟಿಲ್ಲ. ಸಂವಿಧಾನ ನಿಯೋಜಿಸಿ ದ್ದನ್ನಷ್ಟೇ ಮಾಡಿದ್ದೇನೆ. ನಾನು ಯಾರ ಅಧಿಕಾರ ವ್ಯಾಪ್ತಿಯಲ್ಲೂ ಅತಿಕ್ರಮ ಪ್ರವೇಶ ಮಾಡಿಲ್ಲ’ ಎಂದು ಮೋದಿ ಹೇಳಿದ್ದಾರೆ.
1949ರ ನ.26ರಂದು ಸಂವಿಧಾನವನ್ನು ಅಂಗೀಕರಿಸಿಕೊಂಡು 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ನಲ್ಲಿ ಸಂವಿಧಾನ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘಾಲ್, ಸಿಜೆಐ ಸಂಜೀವ್ ಖನ್ನಾ ಮತ್ತು ಸುಪ್ರೀಂಕೋರ್ಟ್ ಬಾರ್ ಅಸೋಸಿಯೇ ಶನ್ ಮುಖ್ಯಸ್ಥ ಕಪಿಲ್ ಸಿಬಲ್ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.