ಯೋಧರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ; ಪ್ರಧಾನಿ ಮೋದಿ ಖಂಡನೆ
Team Udayavani, Feb 14, 2019, 1:41 PM IST
ಹೊಸದಿಲ್ಲಿ : ಪುಲ್ವಾಮಾದ ಸಿಆರ್‌ಪಿಎಫ್ ಯೋಧರ ಮೇಲಿನ ಆತ್ಮಾಹುತಿ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದು,ಯೋಧರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲಿನ ದಾಳಿ ಹೇಯವಾದದ್ದು, ನಾನು ಈ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ವೀರ ಯೋಧರ ಪ್ರಾಣ ತ್ಯಾಗವನ್ನು ವ್ಯರ್ಥವಾಗಲು ಅವಕಾಶ ನೀಡುವುದಿಲ್ಲ. ಇಡೀ ದೇಶವೇ ಹುತಾತ್ಮ ವೀರ ಯೋಧರ ಕುಟುಂಬದೊಂದಿಗೆ ಹೆಗಲಿಗೆ ಹೆಗಲು ನೀಡುತ್ತಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
Attack on CRPF personnel in Pulwama is despicable. I strongly condemn this dastardly attack. The sacrifices of our brave security personnel shall not go in vain. The entire nation stands shoulder to shoulder with the families of the brave martyrs. May the injured recover quickly.
— Narendra Modi (@narendramodi) February 14, 2019
ದಾಳಿಯ ಹಿನ್ನಲೆಯಲ್ಲಿ ಗೃಹ ಸಚಿವ ರಾಜ್‌ನಾಥ್ ಸಿಂಗ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.