ನೀರವ್ ಶೋರೂಮ್‌ನಿಂದ 6 ಕೋಟಿ ಖರೀದಿ:ಸಿಂಘ್ವಿ ಪತ್ನಿಗೆ ನೊಟೀಸ್
Team Udayavani, Feb 20, 2018, 7:26 PM IST
ಹೊಸದಿಲ್ಲಿ : ಪಿಎನ್‌ಬಿ ಬಹುಕೋಟಿ ಹಗರಣ ಕಳಂಕಿತ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್ ಮೋದಿ ಅವರ ಶೋರೂಮ್ ನಿಂದ ಆರು ಕೋಟಿ ರೂ. ಬೆಲೆಯ ವಜ್ರಾಭರಣಗಳನ್ನು ಖರೀದಿಸಿರುವ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಆದಾಯ ತೆರಿಗೆ ಇಲಾಖಾಧಿಕಾರಿಗಳು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರ ಪತ್ನಿ ಅನಿತಾ ಸಿಂಘ್ವಿ ಅವರಿಗೆ ನೊಟೀಸ್ ಜಾರಿ ಮಾಡಿದೆ.
ಇದಕ್ಕೆ ರಾಜಕೀಯವಾಗಿ ಪ್ರತಿಕ್ರಿಯಿಸಿರುವ ಅಭಿಷೇಕ್‌ಸಿಂಘ್ವಿ ಅವರು “ನಾನು ರಾಜಕೀಯ ವಿರೋಧ ಪಕ್ಷದವನಾಗಿರುವುದರಿಂದ ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ನನ್ನ ಪತ್ನಿಗೆ ಐಟಿ ನೊಟೀಸ್ ಜಾರಿಯಾಗಿದೆ; ನಮ್ಮ ಕುಟುಂಬದ ವಿರುದ್ಧದ ಆರೋಪಗಳೆಲ್ಲ ಸುಳ್ಳು’ ಎಂದು ಹೇಳಿದ್ದಾರೆ.
ಆರು ಕೋಟಿ ರೂ. ಮೌಲ್ಯದ ವಜ್ರಾಭರಣಗಳನ್ನು ಕೆಲ ವರ್ಷಗಳ ಹಿಂದೆ ನೀವು ಖರೀದಿಸುವಾಗಿ ಎಷ್ಟು ಮೊತ್ತವನ್ನು ನಗದು ರೂಪದಲ್ಲಿ ಮತ್ತು ಎಷ್ಟು ಮೊತ್ತವನ್ನು ಚೆಕ್ ರೂಪದಲ್ಲಿ ಪಾವತಿಸಿದ್ದೀರಿ ಎಂಬುದನ್ನು ತಿಳಿಸಿ ಎಂದು ಐಟಿ ನೊಟೀಸಿನಲ್ಲಿ ಆದೇಶಿಸಲಾಗಿರುವುದಾಗಿ ಮೂಲಗಳು ತಿಳಿಸಿವೆ.
ಐಟಿ ಮೂಲಗಳಿಗೆ ತಿಳಿದಿರುವ ಪ್ರಕಾರ ಅನಿತಾ ಸಿಂಘ್ವಿ ಅವರು 1.5 ಕೋಟಿ ರೂ.ಗಳನ್ನು ಚೆಕ್ ಮೂಲಕ ಮತ್ತು ಸುಮಾರು 4.8 ಕೋಟಿ ರೂ.ಗಳನ್ನು ನಗದು ರೂಪದಲ್ಲಿ ಪಾವತಿಸಿದ್ದಾರೆ. ಈ ಖರೀದಿಗೆ ಹಣದ ಮೂಲ ಯಾವುದೆಂದೂ ಐಟಿ ನೊಟೀಸ್ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.