ಅಬ್ಬಾ…ಐಟಿ ಬೇಟೆ; 3200 ಕೋಟಿ ರೂ. ಟಿಡಿಎಸ್ ಹಗರಣ ಬಯಲಿಗೆ!
Team Udayavani, Mar 5, 2018, 2:06 PM IST
ಮುಂಬೈ: ಆದಾಯ ತೆರಿಗೆ ಇಲಾಖೆ ಬರೋಬ್ಬರಿ 3,200 ಕೋಟಿ ರೂಪಾಯಿಯ ಟಿಡಿಎಸ್ ಹಗರಣವನ್ನು ಬಯಲಿಗೆಳೆದಿದೆ. 447 ಕಂಪನಿಗಳು ತಮ್ಮ ಉದ್ಯೋಗಿಯ ಸಂಬಳದಿಂದ ಟಿಡಿಎಸ್ ಕಡಿತಗೊಳಿಸಿದ್ದವು, ಆದರೆ ಆ ಹಣವನ್ನು ಐಟಿ ಇಲಾಖೆಯಲ್ಲಿ ಠೇವಣಿ ಇಡದೆ ತಮ್ಮ ವ್ಯವಹಾರಕ್ಕೆ ಬಳಸಿಕೊಂಡಿರುವುದು ಐಟಿ ಪತ್ತೆ ಹಚ್ಚಿದೆ.
ಆದಾಯ ತೆರಿಗೆ ಇಲಾಖೆಯ ಟಿಡಿಎಸ್ ಘಟಕ ಈ 447 ಕಂಪನಿಗಳ ವಿರುದ್ಧ ತನಿಖೆ ಆರಂಭಿಸಿದ್ದು, ಕೆಲವು ಕಂಪನಿಗಳಿಗೆ ವಾರಂಟ್ ಜಾರಿ ಮಾಡಿರುವುದಾಗಿ ಮೂಲಗಳು ತಿಳಿಸಿವೆ.
ಆದಾಯ ತೆರಿಗೆ ಕಾಯ್ದೆ ಪ್ರಕಾರ ಆರೋಪ ಸಾಬೀತಾದರೆ 3ರಿಂದ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ ಎಂದು ವರದಿ ವಿವರಿಸಿದೆ. ಸೆಕ್ಷನ್ 276 ಬಿ ಅಡಿಯಲ್ಲಿ ವಿಚಾರಣೆ ಆರಂಭಿಸಲಾಗಿದೆ.
ಉದ್ಯೋಗಿಗಳ ವಿಶ್ವಾಸದ್ರೋಹ ಹಾಗೂ ವಂಚನೆ ಎಸಗಿದ್ದಕ್ಕೆ ಆದಾಯ ತೆರಿಗೆ ಇಲಾಖೆ ಐಪಿಸಿ ಕಾಯ್ದೆ ಪ್ರಕಾರವೂ ದೂರು ದಾಖಲಿಸಲು ಮುಂದಾಗಿದೆ ಎಂದು ಹೇಳಿದೆ. ಇದರಲ್ಲಿ ರಾಜಕೀಯ ನಂಟು ಹೊಂದಿರುವ, ಪ್ರಭಾವಶಾಲಿ ಬಿಲ್ಡರ್ ವೊಬ್ಬ ಸೇರಿದ್ದು, ಆತ ಉದ್ಯೋಗಿಗಳಿಂದ ಕಡಿತಗೊಳಿಸಿದ್ದ ಸುಮಾರು 100 ಕೋಟಿ ರೂ. ಟಿಡಿಎಸ್ ಹಣವನ್ನು ತನ್ನ ಸ್ವಂತ ವ್ಯವಹಾರಕ್ಕೆ ಬಳಸಿಕೊಂಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.