ಮಧ್ಯಪ್ರದೇಶದಲ್ಲಿ ಸುಖೋಯ್-ಮಿರಾಜ್ ಯುದ್ಧ ವಿಮಾನಗಳ ಮುಖಾಮುಖಿ ಢಿಕ್ಕಿ!; ಭಗ್ನಾವಶೇಷ ಪತ್ತೆ
Team Udayavani, Jan 28, 2023, 12:50 PM IST
ಗ್ವಾಲಿಯರ್: ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು ಪತನಗೊಂಡ ಘಟನೆ ಶನಿವಾರ (ಜನವರಿ 28) ಬೆಳಗ್ಗೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ.
ಸುಖೋಯ್ ಸು-30ಎಂಕೆಐ ಮತ್ತು ಮಿರಾಜ್ 2000 ಯುದ್ಧವಿಮಾನಗಳು ಈ ಪ್ರದೇಶದಲ್ಲಿ ಅಭ್ಯಾಸ ಮಾಡುತ್ತಿದ್ದವು ಎಂದು ವರದಿಯಾಗಿದೆ. ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಎರಡೂ ವಿಮಾನಗಳು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ವಾಯುನೆಲೆಯಿಂದ ಟೇಕಾಫ್ ಆಗಿವೆ. ಆದರೆ, ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯ ಸಂಪೂರ್ಣ ಮೌಲ್ಯಮಾಪನದ ನಂತರ ಇನ್ನಷ್ಟು ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನಗಳ ಅವಶೇಷಗಳನ್ನು ಗುರುತಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಇದನ್ನೂ ಓದಿ:ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ: ಸಿಎಂ ಬೊಮ್ಮಾಯಿ
“ಬೆಳಿಗ್ಗೆ 10-10.15 ರ ಸುಮಾರಿಗೆ ವಿಮಾನ ಅಪಘಾತದ ಬಗ್ಗೆ ಮಾಹಿತಿ ಸಿಕ್ಕಿತು. ಇಲ್ಲಿಗೆ ಬಂದ ನಂತರ ಅದು ಭಾರತೀಯ ವಾಯುಸೇನೆಯ ಯುದ್ಧ ವಿಮಾನ ಎಂದು ತಿಳಿಯಿತು. ಇದು ಯುದ್ಧ ವಿಮಾನವೇ ಅಥವಾ ಸಾಮಾನ್ಯ ವಿಮಾನವೇ ಎಂದು ನಿರ್ಣಯಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಪೈಲಟ್‌ಗಳು ಹೊರಬಂದಿದ್ದಾರೆಯೇ ಅಥವಾ ಇನ್ನೂ ಇದ್ದಾರೆಯೇ ಎಂದು ತಿಳಿಯಬೇಕಿದೆ” ಎಂದು ಭರತ್‌ಪುರ ಡಿಎಸ್‌ಪಿ ಎಎನ್‌ಐಗೆ ತಿಳಿಸಿದರು.
#WATCH | Wreckage seen. A Sukhoi-30 and Mirage 2000 aircraft crashed near Morena, Madhya Pradesh. Search and rescue operations launched. The two aircraft had taken off from the Gwalior air base where an exercise was going on. pic.twitter.com/xqCJ2autOe
— ANI (@ANI) January 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.