Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
Team Udayavani, Nov 1, 2024, 3:55 PM IST
ನವದೆಹಲಿ: ರಾಜೇಶ್ ಕುಮಾರ್ ಸಿಂಗ್ ಅವರು ನವದೆಹಲಿಯ ಸೌತ್ ಬ್ಲಾಕ್‌ನಲ್ಲಿ ರಕ್ಷಣಾ ಕಾರ್ಯದರ್ಶಿಯಾಗಿ ಶುಕ್ರವಾರ (ನ.1) ರಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅರ್ಮಾನಿ ಗಿರ್ಧರ್ ಅವರ ನಿವೃತ್ತಿಯ ನಂತರ ಇಂದು ಆರ್ ಕೆ ಸಿಂಗ್ ನೂತನ ರಕ್ಷಣಾ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೇರಳ ಕೇಡರ್‌ನ 1989-ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದ ಸಿಂಗ್ ಈ ಹಿಂದೆ ಆಗಸ್ಟ್ 20, 2024 ರಿಂದ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ರಕ್ಷಣಾ ಕಾರ್ಯದರ್ಶಿ-ನಿಯೋಜಿತ) ಸೇವೆ ಸಲ್ಲಿಸಿದ್ದರು.
ಅಧಿಕಾರ ವಹಿಸಿಕೊಂಡ ಮೊದಲ ದಿನ, ಸಿಂಗ್ ಅವರು ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ದೇಶಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ವೀರರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ತಾಯ್ನಾಡಿಗಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ನಮ್ಮ ವೀರ ಸೈನಿಕರಿಗೆ ದೇಶ ಸದಾ ಋಣಿಯಾಗಿದೆ ಎಂದು ಹೇಳಿದರು. ನಮ್ಮ ಸೈನಿಕರ ಅಸಾಧಾರಣ ಶೌರ್ಯ ಮತ್ತು ತ್ಯಾಗ ಭಾರತವನ್ನು ಸುರಕ್ಷಿತ ಮತ್ತು ಸಮೃದ್ಧ ರಾಷ್ಟ್ರವನ್ನಾಗಿ ಮಾಡಲು ನಮಗೆ ಶಕ್ತಿಯನ್ನು ನೀಡುತ್ತದೆ ಮತ್ತು ಈ ತ್ಯಾಗಗಳು ನಮ್ಮ ಸ್ಫೂರ್ತಿಯ ಮೂಲವಾಗಿದೆ ಎಂದು ಹೇಳಿದರು.
ರಾಜೇಶ್ ಕುಮಾರ್ ಸಿಂಗ್ ಅವರು ಏಪ್ರಿಲ್ 24, 2023 ರಿಂದ ಆಗಸ್ಟ್ 20, 2024 ರವರೆಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದಲ್ಲಿ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯ ಕಾರ್ಯದರ್ಶಿಯ ಜವಾಬ್ದಾರಿಯನ್ನು ಹೊಂದಿದ್ದರು. ಇದಕ್ಕೂ ಮೊದಲು ಅವರು ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವಾಲಯದಲ್ಲಿ ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿಯಾಗಿದ್ದರು. ಸಿಂಗ್ ಅವರು ನಗರಾಭಿವೃದ್ಧಿ ಸಚಿವಾಲಯ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ಹಲವಾರು ಇತರ ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ.
Shri Rajesh Kumar Singh took over as Defence Secretary at South Block in New Delhi on November 01, 2024. He is a 1989-batch IAS officer from Kerala cadre, who had assumed the charge of the Officer on Special Duty (Defence Secretary-designate) on August 20, 2024.#RajeshKumarSingh… pic.twitter.com/ZZ4KzrXk6o
— Defence Production India (@DefProdnIndia) November 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.