ಶ್ರೀನಗರ್- ಜಮ್ಮು ರಾಷ್ಟ್ರೀಯ ಹೆದ್ದಾರಿ ಸಮೀಪ ಐಇಡಿ ಪತ್ತೆ, ತಪ್ಪಿದ ಭಾರೀ ಅನಾಹುತ
Team Udayavani, Nov 21, 2019, 3:04 PM IST
ಶ್ರೀನಗರ್: ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಐಇಡಿ(ಸುಧಾರಿತ ಸ್ಫೋಟಕ ಸಾಧನ) ಪತ್ತೆಯಾದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಅನಂತ್ ನಾಗ್ ಜಿಲ್ಲೆಯ ವಾನ್ ಪೋಹ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳು ಪಹರೆ ನಡೆಸುತ್ತಿದ್ದ ಸಂದರ್ಭದಲ್ಲಿ ಐಇಡಿ ಪತ್ತೆಯಾಗಿತ್ತು. ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಐಇಡಿಯನ್ನು ನಿಷ್ಕ್ರಿಯಗೊಳಿಸುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದಂತಾಗಿದೆ ಎಂದು ವರದಿ ವಿವರಿಸಿದೆ.
ಸ್ಫೋಟ ನಡೆಸುವ ನಿಟ್ಟಿನಲ್ಲಿ ಉಗ್ರರೇ ಐಇಡಿಯನ್ನು ಅಡಗಿಸಿಟ್ಟುರುವುದಾಗಿ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಶ್ರೀನಗರದಿಂದ ಜಮ್ಮುವಿಗೆ ತೆರಳಲು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಮುಖ ಸಂಚಾರದ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.