![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 17, 2024, 4:58 PM IST
ಹೊಸದಿಲ್ಲಿ: ”2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲದಿದ್ದರೆ, 2029 ರಲ್ಲಿ ಆಮ್ ಆದ್ಮಿ ಪಕ್ಷವು ಭಾರತವನ್ನು ಬಿಜೆಪಿಯಿಂದ ಮುಕ್ತಗೊಳಿಸುತ್ತದೆ” ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಪ್ರತಿಜ್ಞೆ ಮಾಡಿದ್ದಾರೆ.
70 ಸದಸ್ಯ ಬಲದ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಸಾಬೀತು ಮತದಾನದ ವೇಳೆ ಆಮ್ ಆದ್ಮಿ ಪಕ್ಷದ 62 ಶಾಸಕರ ಪೈಕಿ 54 ಮಂದಿ ಹಾಜರಿದ್ದರು. ಪ್ರತಿಪಕ್ಷ ಬಿಜೆಪಿ ಎಂಟು ಶಾಸಕರನ್ನು ಹೊಂದಿದೆ, ಅವರಲ್ಲಿ ಏಳು ಮಂದಿ ಪ್ರಸ್ತುತ ಅಮಾನತುಗೊಂಡಿದ್ದಾರೆ.
ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸಿದ ಬಳಿಕ ಮಾತನಾಡಿದ ಕೇಜ್ರಿವಾಲ್, ”ಬಿಜೆಪಿಯು ನಮ್ಮ ಮೇಲೆ ದಾಳಿ ಮಾಡಿ ನಮ್ಮ ಮಂತ್ರಿಗಳನ್ನು ಬಂಧಿಸಿದ ರೀತಿ ದೇಶಾದ ಜನರಿಗೆ ತಿಳಿದಿದೆ. ಅವರು ಜನರನ್ನು ಮೂರ್ಖರು ಎಂದು ಭಾವಿಸುತ್ತಾರೆ, ಆದರೆ ಅವರು ಹಾಗಿಲ್ಲ.ಪ್ರಧಾನಿ ಮೋದಿಯವರು ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ತಿಕ್ಕಲು ಬಯಸುತ್ತಿದ್ದಾರೆಯೇ ಎಂದು ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ ಮಕ್ಕಳು ಕೂಡ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ನಮ್ಮ ಅನೇಕ ಮಂತ್ರಿಗಳನ್ನು ಬಂಧಿಸಿದ್ದಾರೆ, ನಮ್ಮ ನಂಬರ್ 2, ನಂಬರ್ 3 ಮತ್ತು ನಂಬರ್ 4 ಜೈಲಿನಲ್ಲಿದ್ದಾರೆ, ಶೀಘ್ರದಲ್ಲೇ ನಂಬರ್ 1 ಆಗಲಿದೆ ಎಂದು ಮಾತುಕತೆ ನಡೆಸಲಾಗುತ್ತಿದೆ. ಇಡೀ ರಾಷ್ಟ್ರದಲ್ಲಿ ಆಮ್ ಆದ್ಮಿ ಪಕ್ಷವು ಬಿಜೆಪಿಯ ದೊಡ್ಡ ಸವಾಲಾಗಿರುವ ಕಾರಣ ಇದು ನಡೆಯುತ್ತಿದೆ” ಎಂದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.