ರೆಂಟ್ ಎ ಬೈಕ್; ಪ್ರವಾಸಿಗರಿಗೆ ಖಾಸಗಿ ಬೈಕ್ ಅಕ್ರಮವಾಗಿ ಬಾಡಿಗೆಗೆ ನೀಡಿದರೆ ವಾಹನ ಜಪ್ತಿ
Team Udayavani, Oct 20, 2022, 4:35 PM IST
ಪಣಜಿ: ರಾಜ್ಯದಲ್ಲಿ ರೆಂಟ್ ಎ ಬೈಕ್ ಹೆಸರಿನಲ್ಲಿ ಪ್ರವಾಸಿಗರಿಗೆ ಖಾಸಗಿ ಬೈಕ್ ಗಳನ್ನು ಅಕ್ರಮವಾಗಿ ಬಾಡಿಗೆಗೆ ನೀಡುತ್ತಿರುವುದು ಹೆಚ್ಚಾಗಿದೆ. ಅಂತಹ ವಾಹನಗಳು ಕಂಡು ಬಂದರೆ ಜಪ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಎಚ್ಚರಿಕೆ ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಪಣಜಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಸಂಖ್ಯೆಯನ್ನು ತಡೆಯಲು ಸರ್ಕಾರ ಶುಕ್ರವಾರ ಸಾರ್ವಜನಿಕ ವಿಚಾರಣೆ ನಡೆಸುತ್ತಿದೆ. ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಪಡೆಯಲಾಗುತ್ತಿದೆ. ಪಣಜಿಯ ಅಟಲ್ ಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಓಡಾಟ ನಿಷೇಧಿಸಿದ್ದರೂ ಕೂಡ ಕೆಲವು ಪ್ರವಾಸಿಗರು ಖಾಸಗಿ ಸಂಖ್ಯೆಯ ದ್ವಿಚಕ್ರ ವಾಹನಗಳೊಂದಿಗೆ ಈ ಮಾರ್ಗವಾಗಿ ಓಡಾಡುತ್ತಿದ್ದಾರೆ. ಇದನ್ನು ಗಮನಿಸಿದ್ದೇವೆ. ಗೋವಾದ ಯಾರೂ ಕೂಡ ಅಟಲ್ ಸೇತುವೆಯ ಮೇಲೆ ಬೈಕ್ ಸವಾರಿ ನಡೆಸುವುದಿಲ್ಲ. ಇದರಿಂದ ಈ ವಾಹನಗಳನ್ನು ಪ್ರವಾಸಿಗರಿಗೆ ಅಕ್ರಮವಾಗಿ ಬಾಡಿಗೆಗೆ ನೀಡಿರುವುದು ಸ್ಪಷ್ಟವಾಗಿದೆ. ಸೇತುವೆ ಮೇಲೆ ಓಡಾಡುವ ಬೈಕ್ ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಚಿವ ಮಾವಿನ್ ಗುದಿನ್ಹೊ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.