ಅಗತ್ಯಬಿದ್ದರೆ ಪ.ಬಂಗಾಲದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬಹುದು
Team Udayavani, Jun 11, 2019, 6:05 AM IST
ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ-ಟಿಎಂಸಿ ನಡುವಿನ ಘರ್ಷಣೆ ಮತ್ತು ವಾಗ್ವಾದದ ಬಿಸಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಗೋಚರಿಸುತ್ತಿಲ್ಲ. ಸೋಮವಾರವೂ ಎರಡೂ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆದಿದ್ದು, ಪ್ರತಿಭಟನೆಗಳು, ಬಂದ್‌ನಂಥ ಘಟನೆಗಳೂ ವರದಿಯಾಗಿವೆ. ಇದರ ನಡುವೆಯೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆಯೇ ಎಂಬ ಅನುಮಾನಗಳೂ ಮೂಡತೊಡಗಿವೆ.
ಇದಕ್ಕೆ ಪೂರಕವೆಂಬಂತೆ ಪಶ್ಚಿಮ ಬಂಗಾಲ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಸೋಮವಾರ ದಿಲ್ಲಿಗೆ ತೆರಳಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾಗಿ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ಆದರೆ ಮಾತುಕತೆಯ ಹೆಚ್ಚಿನ ವಿವರವನ್ನು ಬಹಿರಂಗಪಡಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರಪತಿ ಆಳ್ವಿಕೆ?
“ಇಂಡಿಯಾ ಟುಡೇ’ಗೆ ಸೋಮವಾರ ನೀಡಿದ ಸಂದರ್ಶನದಲ್ಲಿ ರಾಜ್ಯಪಾಲ ತ್ರಿಪಾಠಿ ಅವರು, ಪಶ್ಚಿಮ ಬಂಗಾಲದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋದರೆ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅಭಿ ಪ್ರಾಯಪಟ್ಟಿದ್ದಾರೆ. ಅಂಥ ಬೇಡಿಕೆ ಬಂದಾಗ ಕೇಂದ್ರ ಸರಕಾರವೇ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಆದರೆ ನಾನು ಪ್ರಧಾನಿ ಅಥವಾ ಅಮಿತ್ ಶಾ ಬಳಿ ರಾಷ್ಟ್ರಪತಿ ಆಳ್ವಿಕೆ ಹೇರುವ ವಿಚಾರದ ಕುರಿತು ಚರ್ಚಿಸಿಲ್ಲ ಎಂದಿದ್ದಾರೆ ತ್ರಿಪಾಠಿ. ಜತೆಗೆ, ಎಲ್ಲ ರಾಜಕೀಯ ಪಕ್ಷಗಳೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.
ಕರಾಳ ದಿನ
ಬಂಗಾಲದಲ್ಲಿ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆ ಮತ್ತು ತಮ್ಮ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಸೋಮವಾರ ರಾಜ್ಯಾದ್ಯಂತ “ಕರಾಳ ದಿನ’ ಆಚರಿಸಿದೆ. ಜತೆಗೆ ಅತೀ ಹೆಚ್ಚು ಹಿಂಸಾಚಾರಕ್ಕೆ ಸಾಕ್ಷಿಯಾದ ನಾರ್ತ್ 24 ಪರಗಣ ಜಿಲ್ಲೆಯಲ್ಲಿ 12 ಗಂಟೆಗಳ ಕಾಲ ಬಂದ್ ಕೂಡ ನಡೆಸಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಭಟನ ಮೆರವಣಿಗೆ ನಡೆಸಿ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಸೀರ್ಹಾತ್‌ನಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಯಿತು. ಬಿಜೆಪಿ ಕಾರ್ಯಕರ್ತರ ಮೃತದೇಹಗಳನ್ನು ಕೋಲ್ಕತಾಗೆ ಕೊಂಡೊಯ್ಯಲು ಪೊಲೀಸರು ಅಡ್ಡಿಪಡಿಸಿದ್ದನ್ನು ಖಂಡಿಸಿ, ಸೋಮವಾರ ಬಂದ್‌ಗೆ ಬಿಜೆಪಿ ರವಿವಾರವೇ ಕರೆ ನೀಡಿತ್ತು.
ನನ್ನ ಸರಕಾರವನ್ನು ಉರುಳಿಸಬೇಕೆಂದೇ ಕೇಂದ್ರ ಸರಕಾರ ಮತ್ತು ಬಿಜೆಪಿ ರಾಜ್ಯದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿವೆ.ಅವರ ವಿರುದ್ಧ ಧ್ವನಿಯೆತ್ತುವ ಧೈರ್ಯ ಮಮತಾಗೆ ಮಾತ್ರ ಇರುವುದು ಎಂಬುದು ಅವರಿಗೂ ಗೊತ್ತಿದೆ.
– ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.