ನಾವು ಅಧಿಕಾರಕ್ಕೆ ಬಂದರೆ ದೇಶಕ್ಕೆ ಒಂದೇ ಜಿಎಸ್‌ಟಿ
Team Udayavani, Nov 12, 2017, 1:55 PM IST
ಅಹಮದಾಬಾದ್/ಹೊಸದಿಲ್ಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸ ಹೊಂದಿರುವಂತಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯ ಪ್ರಮಾಣ ಒಂದೇ ತೆರಿಗೆ ಹಂತದಲ್ಲಿ ಇರಲಿದ್ದು, ಶೇ.18ರಲ್ಲಿಯೇ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ. ಹೀಗಾಗಿ, ಗುಜರಾತ್ ಚುನಾವಣಾ ಪ್ರಚಾರದಲ್ಲಿಯೂ ಜಿಎಸ್‌ಟಿ ವಾಗ್ವಾದ ಪರಿವರ್ತನೆಯಾಗಿದೆ.
2019ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ದೇಶಾದ್ಯಂತ ಒಂದೇ ವಿಧದ ತೆರಿಗೆ ವಿಧಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಶೇ. 18 ಕ್ಕೆ ತೆರಿಗೆ ದರ ಇಳಿಸಲು ಬಿಜೆಪಿಯಿಂದ ಸಾಧ್ಯವಾಗಿಲ್ಲ. ಅದನ್ನು ನಾವು ಮಾಡುತ್ತೇವೆ. ಶುಕ್ರವಾರ 200ಕ್ಕೂ ಹೆಚ್ಚು ಸಾಮಗ್ರಿಗಳ ತೆರಿಗೆ ದರವನ್ನು ಶೇ.28ರಿಂದ ಶೇ. 18ಕ್ಕೆ ಕೇಂದ್ರ ಸರಕಾರ ಇಳಿಸಿತ್ತಾದರೂ, ಇದು ತೃಪ್ತಿ ತಂದಿಲ್ಲ. ದೇಶಕ್ಕೆ ಐದು ವಿವಿಧ ಹಂತದ ತೆರಿಗೆ ಪದ್ಧತಿ ಅಗತ್ಯವಿಲ್ಲ ಎಂದು ರಾಹುಲ್ ಹೇಳಿದ್ದಾರೆ.
ಸರಕು ಸೇವಾ ತೆರಿಗೆಯನ್ನು (ಜಿಎಸ್‌ಟಿ) ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಟೀಕಿಸಿರುವ ರಾಹುಲ್, ಗಬ್ಬರ್ ಸಿಂಗ್ ಟ್ಯಾಕ್ಸ್ ಅನ್ನು ಜಿಎಸ್‌ಟಿಯನ್ನಾಗಿ ಪರಿವರ್ತಿಸುವವರೆಗೂ ವಿರಮಿಸುವುದಿಲ್ಲ. ಈ ಗಬ್ಬರ್ ಸಿಂಗ್ ಟ್ಯಾಕ್ಸ್ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ ಎಂದು ದೂರಿದರು.
ಮಾತಾಡಿ ಮೋದಿ ಜಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುತ್ರನ ಕಂಪೆನಿಯ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಏನಾದರೂ ಪ್ರತಿಕ್ರಿಯೆ ನೀಡಿ ಮೋದಿಜಿ ಎಂದು ರಾಹುಲ್ ವ್ಯಂಗ್ಯವಾಡಿದರು. ಕೇಂದ್ರ ಮತ್ತು ಇತರ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಬಿಜೆಪಿಯವರಿಗೆ ಎಲ್ಲವೂ ಇದೆ ಎಂದು ಅವರು ಕಟಕಿಯಾಡಿದರು.
ಶ್ರೇಯಸ್ಸು ರಾಹುಲ್‌ಗೆ: ಈ ನಡುವೆ 178 ವಸ್ತುಗಳ ತೆರಿಗೆ ಪ್ರಮಾಣವನ್ನು ಕೇಂದ್ರ ಸರಕಾರ ಇಳಿಕೆ ಮಾಡಿದ್ದಕ್ಕೆ ರಾಹುಲ್ ಗಾಂಧಿಯೇ ಕಾರಣ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಗುಜರಾತ್‌ನಲ್ಲಿ ರಾಹುಲ್ ಹಮ್ಮಿಕೊಂಡಿರುವ ಪ್ರಚಾರಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿಂತೆಗೊಳಗಾದ ಕೇಂದ್ರ ಈ ನಿರ್ಧಾರ ಪ್ರಕಟಿಸಿದೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹೊÉàಟ್ ಹೇಳಿದ್ದಾರೆ.
ಅಕ್ಷರಧಾಮ ದೇಗುಲಕ್ಕೆ ಭೇಟಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಕ್ಷರಧಾಮ ದೇಗುಲಕ್ಕೆ ಭೇಟಿ ನೀಡುವ ಮೂಲಕ ಉತ್ತರ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಪಟೇಲ್ ಸಮುದಾಯದಲ್ಲಿಯೇ ಇರುವ ಸ್ವಾಮಿ ನಾರಾಯಣ ಪಂಗಡಕ್ಕೆ ಸೇರಿರುವ ದೇಗಲವಾಗಿದೆ. ಆರು ಜಿಲ್ಲೆಗಳಲ್ಲಿ ರಾಹುಲ್ ಪ್ರಚಾರ ನಡೆಸಲಿದ್ದಾರೆ. ಅಷ್ಟೇ ಅಲ್ಲ ಮೂರು ದಿನಗಳಲ್ಲಿ ಅವರು ಇತರ ಪ್ರಮುಖ ದೇಗುಲಗಳಿಗೂ ಭೇಟಿ ನೀಡಲಿದ್ದಾರೆ. ಬನಸ್‌ಕಂತಾ ಜಿಲ್ಲೆಯಲ್ಲಿನ ಅಂಬಾಜಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.
ಕೇಂದ್ರಕ್ಕೆ ಚಿದಂಬರಂ ಲೇವಡಿಯ ಅಭಿನಂದನೆ
ಜಿಎಸ್‌ಟಿ ದರವನ್ನು ಕೇಂದ್ರ ಸರಕಾರ ಇಳಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ “ಥ್ಯಾಂಕ್ಯೂ ಗುಜರಾತ್’ ಎಂದು ಟ್ವೀಟ್ ಮಾಡಿದ್ದಾರೆ. ಸಂಸತ್ತು ಮತ್ತು ಕಾಮನ್ ಸೆನ್ಸ್ ಮಾಡದ ಕೆಲಸವನ್ನು ಗುಜರಾತ್ ಚುನಾವಣೆ ಮಾಡಿದೆ. ಗುಜರಾತ್‌ನಲ್ಲಿನ ಸಣ್ಣ ವ್ಯಾಪಾರಿಗಳು ಎದುರಿಸುತ್ತಿರುವ ಸಂಕಷ್ಟದಿಂದಾಗಿ ಸರಕಾರ ದರ ಇಳಿಕೆ ಮಾಡಿದೆ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ. ನಾಲ್ಕು ತಿಂಗಳು 10 ದಿನಗಳಲ್ಲಿ ಅರ್ಥ ವ್ಯವಸ್ಥೆಯನ್ನು ಚೇತರಿಕೆ ಕಾಣುವಂತೆ ಮಾಡಿದ ಹಣ ಕಾಸು ಇಲಾಖೆಯನ್ನು ಅಭಿನಂದಿಸ ಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.