ಮುಂದಿನ ವರ್ಷದಿಂದಲೇ ರಾಯಚೂರಲ್ಲಿ ಐಐಐಟಿ
Team Udayavani, Jan 25, 2018, 6:50 AM IST
ನವದೆಹಲಿ: ರಾಯಚೂರಿನಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಇದು ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ. ಈ ಸಂಬಂಧ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಘೋಷಣೆ ಮಾಡಿದ್ದು, ಅನುಮತಿ ಪತ್ರವನ್ನು ಸಚಿವ ಅನಂತಕುಮಾರ್ಗೆ ಹಸ್ತಾಂತರಿಸಿದ್ದಾರೆ. 2018-19ರ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರವು ಪರ್ಯಾಯ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಜಾವಡೇಕರ್ ಸೂಚಿಸಿದ್ದಾರೆ.
ಐಐಐಟಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿದ್ದು, ರಾಜ್ಯ ಸರ್ಕಾರವು ಭೂಮಿಯನ್ನು ಒದಗಿಸಬೇಕಾಗುತ್ತದೆ. ರಾಯಚೂರಿನಲ್ಲಿ ಐಐಐಟಿ ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಈ ನಿರ್ಧಾರ ಉ.ಕ. ಭಾಗದ ಅಭಿವೃದ್ಧಿಯಿಂದ ಮಹತ್ವದ್ದಾಗಿದ್ದು, ಅದಕ್ಕಾಗಿ ಪ್ರಧಾನಿ ಮೋದಿ ಮತ್ತು ಸಚಿವ ಪ್ರಕಾಶ್ ಜಾವಡೇ ಕರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
– ಬಿ.ಎಸ್.ಯಡಿಯೂರಪ್ಪ,
ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.