Goa Karnataka Border: ಅಕ್ರಮ ಮದ್ಯ ಸಾಗಣೆ… ಗೋವಾ ಕರ್ನಾಟಕ ಗಡಿಯಲ್ಲಿ ಬಿಗಿ ತಪಾಸಣೆ
Team Udayavani, Sep 21, 2023, 1:45 PM IST
ಪಣಜಿ: ಅಬಕಾರಿ ಇಲಾಖೆಯ ತೆರಿಗೆ ವ್ಯತ್ಯಾಸದಿಂದಾಗಿ ಕರ್ನಾಟಕಕ್ಕಿಂತ ಗೋವಾದಲ್ಲಿ ಮದ್ಯವು ಅಗ್ಗವಾಗಿದೆ. ಹಾಗಾಗಿ ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ನಡೆಯುತ್ತಿರುವುದು ಕರ್ನಾಟಕದ ಅಬಕಾರಿ ಇಲಾಖೆಯ ತೆರಿಗೆ ಮೇಲೆ ಪರಿಣಾಮ ಬೀರುತ್ತಿರುವುದನ್ನು ಮನಗಂಡ ಕರ್ನಾಟಕ ಸರ್ಕಾರ ಹೆಚ್ಚಿನ ತೆರಿಗೆಯನ್ನು ವಸೂಲಿ ಮಾಡುವಂತೆ ಅಬಕಾರಿ ಇಲಾಖೆಗೆ ಸೂಚಿಸಿದ್ದು, ಅಬಕಾರಿ ಇಲಾಖೆ ಗೋವಾ ರಾಜ್ಯದ ಗಡಿಗಳಲ್ಲಿ ಮದ್ಯ ಅಕ್ರಮ ತಡೆಗೆ ಭದ್ರತೆಯನ್ನು ಹೆಚ್ಚಿಸಿದೆ. ಗೋವಾದಿಂದ ಕರ್ನಾಟಕ್ಕೆ ತೆರಳುವ ಪ್ರಯಾಣಿಕರ ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಗೋವಾದಿಂದ ಕರ್ನಾಟಕಕ್ಕೆ ಒಂದು ಬಾಟಲಿ ಮದ್ಯ ಕೊಂಡೊಯ್ದರೂ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾರವಾರ ಅಬಕಾರಿ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ವಾರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾದಿಂದ ಅಕ್ರಮ ಮದ್ಯ ಸಾಗಣೆ ತಡೆಯಲು ಆದೇಶ ನೀಡಿದ್ದರು. ಈ ಆದೇಶವನ್ನು ಜಾರಿಗೊಳಿಸಲು ಇತ್ತೀಚೆಗೆ ಕಾರವಾರದಲ್ಲಿ ಅಬಕಾರಿ ಇಲಾಖೆಯ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಅಬಕಾರಿ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಗೋವಾ ಕರ್ನಾಟಕ ಗಡಿಯಲ್ಲಿ ಹೆಚ್ಚಿನ ತಪಾಸಣೆಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗೋವಾದಿಂದ ಅಕ್ರಮ ಮದ್ಯ ಸಾಗಾಟ ತಡೆಯಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬಕಾರಿ ಇಲಾಖೆಗೆ ಸೂಚನೆ ನೀಡಿದ್ದರು. ಅದರಂತೆ ಶನಿವಾರ ಕಾರವಾರದಲ್ಲಿ ಅನ್ಮೋದ್, ಮಾಜಾಳಿ ಅಬಕಾರಿ ಅಧಿಕಾರಿಗಳು ಹಾಗೂ ಜಿಲ್ಲಾ ಅಬಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಗೋವಾ ಗಡಿಭಾಗದ ಅನ್ಮೋಡ್, ಮಾಜಾಳಿ ಮೂಲಕ ಮದ್ಯ ಸಾಗಾಣಿಕೆ ತಡೆಯುವುದು ಹೇಗೆ ಎಂಬ ಬಗ್ಗೆ ಚರ್ಚೆ ನಡೆದಿತ್ತು. ಅದರಂತೆಯೇ ಗಡಿಯಲ್ಲಿ ಸದ್ಯ ಅಬಕಾರಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ: Tragedy: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.