Goa ಸಲೂನ್ ಹೆಸರಿನಲ್ಲಿ ಅಕ್ರಮ ಮಸಾಜ್ ಪಾರ್ಲರ್!
Team Udayavani, Apr 13, 2023, 3:31 PM IST
ಪಣಜಿ: ಗೋವಾದ ಕಲಂಗುಟ್‍ನಲ್ಲಿ ಸಲೂನ್ ಹೆಸರಿನಲ್ಲಿ ಅಕ್ರಮ ಮಸಾಜ್ ಪಾರ್ಲರ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ದೂರು ಸ್ವೀಕರಿಸಿದ ಪೊಲೀಸರು ಸಲೂನ್ ಅನ್ನು ಸೀಲ್ ಮಾಡಿದ್ದಾರೆ.
ಕಲಂಗುಟ್‍ನಲ್ಲಿ ಸಲೂನ್‍ಗಾಗಿ ವ್ಯಕ್ತಿಯೊಬ್ಬರು ಬಾಡಿಗೆ ನೀಡಿದ್ದರು. ಆದರೆ ಆ ಬಾಡಿಗೆ ಕೋಣೆಯಲ್ಲಿ ಮತ್ತೊಂದು ಕೋಣೆ ನಿರ್ಮಾಣ ಮಾಡಿರುವ ಸಂಶಯ ಅಂಗಡಿಯ ಮಾಲೀಕರಿಗೆ ಬಂದಿತ್ತು. ಇದರಿಂದ ಅನುಮಾನಗೊಂಡ ಮಾಲಕರು ಪೋಲಿಸರಿಗೆ ದೂರು ನೀಡಿದ್ದರು.
ಪಮಿರ್ಂದರ್ ಸಿಂಗ್ ಎಂಬ ವ್ಯಕ್ತಿ ಸಲೂನ್ ನಡೆಸಲು ಅಂಗಡಿಯನ್ನು ಬಾಡಿಗೆಗೆ ಪಡೆದಿದ್ದ. ಆದರೆ, ಸ್ವಲ್ಪ ಸಮಯದ ನಂತರ, ಅವರು ಆ ಅಂಗಡಿಯ ಒಳಗೆ ಸಣ್ಣ ಕೋಣೆ ನಿರ್ಮಿಸಿದರು. ಅಲ್ಲದೆ, ಅಲ್ಲಿ ಒಂದು ಶೌಚಾಲಯವನ್ನು ನಿರ್ಮಿಸಲಾಗಿತ್ತು. ಈ ಬಗ್ಗೆ ಆತನ ಬಳಿ ಯಾವುದೇ ಪರವಾನಿಗೆ ಇಲ್ಲ, ಈ ವೇಳೆ ಸ್ಥಳೀಯರು ಅನುಮಾನಗೊಂಡು ಅಂಗಡಿ ಮಾಲಕರನ್ನು ಸಂಪರ್ಕಿಸಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಈ ಅಂಗಡಿಯ ಮಾಲಕರು ಮುಂಬೈನಲ್ಲಿದ್ದು, ಘಟನೆಯ ಮಾಹಿತಿ ಲಭ್ಯವಾದ ಕೂಡಲೇ ಸ್ಥಳಕ್ಕೆ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸ್ಪಾ ಗೆ ಭೇಟಿ ನೀಡಿ ಪ್ರದೇಶವನ್ನು ಸೀಲ್ ಮಾಡಿದ್ದಾರೆ. ಪ್ರಕರಣದಲ್ಲಿ ಪೋಲಿಸರು ಇದುವರೆಗೂ ಯಾರನ್ನೂ ಬಂಧಿಸಿಲ್ಲ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.