ED 8ನೇ ಸಮನ್ಸ್ ಜಾರಿ; ಹೇಮಂತ್ ಸೊರೇನ್‌ಗೆ ಹಾಜರಾಗಲು ಗಡುವು
Team Udayavani, Jan 13, 2024, 7:14 PM IST
ರಾಂಚಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರಿಗೆ ಇಡಿ 8ನೇ ಸಮನ್ಸ್ ಜಾರಿ ಮಾಡಿದ್ದು, ಜನವರಿ 16 ರಿಂದ 20ರ ನಡುವೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಈ ಹಿಂದೆ ಸಮನ್ಸ್ ಜಾರಿಯಾದಾಗ ಹಾಜರಾಗಲು ವಿಫಲವಾದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಇಡಿ ಸೊರೆನ್ ಅವರನ್ನು ಕೇಳಿದ್ದು, ಕಳೆದ ತಿಂಗಳು, ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಿತ್ತು.
ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲು ಕೇಳಲಾಗಿದೆ. ಜಾರ್ಖಂಡ್‌ನಲ್ಲಿ ಮಾಫಿಯಾದಿಂದ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆ ನಡೆಯುತ್ತಿದೆ” ಎಂದು ಆರೋಪಿಸಿ ಇಡಿ ತನಿಖೆ ನಡೆಸುತ್ತಿದೆ.
ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಛಾವಿ ರಂಜನ್ ಸೇರಿದಂತೆ 14 ಜನರನ್ನು ಏಜೆನ್ಸಿ ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.