ಮುಂದಿನ ಪ್ರಧಾನಿಯಾಗಲು ನಾನೇ ಸಮರ್ಥ: ಯಶವಂತ ಸಿನ್ಹಾ
Team Udayavani, Jan 22, 2019, 5:42 AM IST
ಹೊಸದಿಲ್ಲಿ : ದೇಶದಲ್ಲಿ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ, ಲಕ್ಷಾಂತರ ಕಿ.ಮೀ. ರಸ್ತೆಗಳನ್ನು ನಿರ್ಮಿಸುವ, ನಗರ-ಪಟ್ಟಣಗಳನ್ನು ಕಟ್ಟುವ ಮತ್ತು ಅಸಂಖ್ಯ ಕೈಗಾರಿಕೆಗಳನ್ನು, ನೀರಾವರಿ ಯೋಜನೆಗಳನ್ನು ಸ್ಥಾಪಿಸುವ ಅಗತ್ಯವಿದ್ದು ಈ ಎಲ್ಲ ಕೆಲಸಗಳನ್ನು ಮಾಡುವುದಕ್ಕೆ ದೇಶದಲ್ಲಿ ಅರ್ಹ ನಾಯಕ ಇಲ್ಲದಿರುವುದರಿಂದ ಮತ್ತು ಈ ಎಲ್ಲದಕ್ಕೆ ಅತ್ಯಂತ ನಿಕಟವಿರುವ ವ್ಯಕ್ತಿ ತಾನಾಗಿರುವುದರಿಂದ ತಾನೇ ಮುಂದಿನ ಪ್ರಧಾನಿಯಾಗುವುದಕ್ಕೆ ಅರ್ಹ ವ್ಯಕ್ತಿ ಎಂದು ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ ಹೇಳಿಕೊಂಡಿದ್ದಾರೆ.
ಯಶವಂತ ಸಿನ್ಹಾ ಅವರು ದಿ| ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಹಿಂದಿನ ಎನ್‌ಡಿಎ ಸರಕಾರದಲ್ಲಿ ಹಣಕಾಸು ಸಚಿವರಾಗಿದ್ದವರು. ಈಚೆಗೆ ಬಿಜೆಪಿಯಿಂದ ಹೊರಬಂದಿರುವ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯುಗ್ರ ಟೀಕಾಕಾರರಾಗಿದ್ದಾರೆ.
ಟಿವಿ ಸುದ್ದಿ ವಾಹಿನಿ ಜತೆಗೆ ಮಾತನಾಡುತ್ತಿದ್ದ ಯಶವಂತ ಸಿನ್ಹಾ ಅವರು ‘ಹಾಲಿ ಎನ್‌ಡಿಎ ಸರಕಾರದಲ್ಲಿ ಸಾರಿಗೆ ಸಚಿವರಾಗಿರುವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿಯಾಗುವ ಅವಕಾಶ ಇಲ್ಲ; ಏಕೆಂದರೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 200ಕ್ಕಿಂತ ಕಡಿಮೆ ಸೀಟುಗಳು ಪ್ರಾಪ್ತವಾದರೂ ಪ್ರಧಾನಿ ನರೇಂದ್ರ ಮೋದಿ ಅವರಾಗಲೀ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಾಗಲೀ ನಿವೃತ್ತರಾಗುವುದಿಲ್ಲ; ಆದುದರಿಂದ ಗಡ್ಕರಿ ಅವರು ಮೋದಿ ಅವರ ಉತ್ತರಾಧಿಕಾರಿ ಆಗಲಾರರು’ ಎಂದು ಹೇಳಿದರು.
‘ಭಾರತಕ್ಕೆ ಈಗ ಕೋಟ್ಯಂತರ ಉದ್ಯೋಗ ಸೃಷ್ಟಿಸುವ, ಕೃಷಿಯನ್ನು ಲಾಭದಾಯಕ ಉದ್ಯಮ ಮಾಡಬಲ್ಲ, ಲಕ್ಷಗಟ್ಟಲೆ ಕಿ.ಮೀ. ರಸ್ತೆ ನಿರ್ಮಿವ, ಅಸಂಖ್ಯಾತ ಕೈಗಾರಿಕೆಗಳನ್ನು, ನಗರ-ಪಟ್ಟಣಗಳನ್ನು, ನೀರಾವರಿ ಯೋಜನೆಗಳನ್ನು ನಿರ್ಮಿಸುವ ಸಮರ್ಥ ನಾಯಕನ ಅಗತ್ಯವಿದೆ. ಆದರೆ ನನ್ನ ದೃಷ್ಟಿಯಲ್ಲಿ ಅಂತಹ ನಾಯಕ ದೇಶದಲ್ಲಿ ಇಲ್ಲ; ಹಾಗಿದ್ದರೂ ಈ ಎಲ್ಲ ಯೋಚನೆ – ಯೋಜನೆಗಳಿಗೆ ನಾನು ಅತ್ಯಂತ ನಿಕಟನಿರುವುದರಿಂದ ಮುಂದಿನ ಪ್ರಧಾನಿಯಾಗುವುದಕ್ಕೆ ನಾನೇ ಸೂಕ್ತ ವ್ಯಕ್ತಿ’ ಎಂದು ಯಶವಂತ ಸಿನ್ಹಾ ಹೇಳಿದರು.
ಟಿವಿ ಶೋದಲ್ಲಿ ಸಿನ್ಹಾ ಅವರ ಪಕ್ಕದಲ್ಲೇ ಕುಳಿತಿದ್ದ ಸಿಪಿಎಂ ನಾಯಕ ಸೀತಾರಾಮ ಯೆಚೂರಿ ಅವರು, ಸಿನ್ಹಾ ಬಳಿಕ ನಾನೇ ಮುಂದಿನ ಪ್ರಧಾನಿಯಾಗಲು ಸಮರ್ಥ ವ್ಯಕ್ತಿ ಎಂದು ಹೇಳಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.