ದೇಶದ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ ನೀಡುವ ಕೇಂದ್ರದ ನಿರ್ಧಾರಕ್ಕೆ ಐಎಮ್ಎ ಶ್ಲಾಘನೆ
ಕೋವಿಡ್ ಸೋಂಕನ್ನು ದೇಶದಿಂದ ಹೊರಕ್ಕೆ ಅಟ್ಟಲು ಸರ್ಕಾರದೊಂದಿಗೆ ಎಂದಿಗೂ ಐಎಮ್ಎ ಶ್ರಮಿಸಲಿದೆ : ಡಾ. ಜೆ. ಜಯಲಾಲ್
Team Udayavani, Jun 7, 2021, 8:34 PM IST
ನವ ದೆಹಲಿ : ಜೂನ್ 21 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವನ್ನು ಭಾರತೀಯ ವೈದ್ಯಕೀಯ ಮಂಡಳಿ(ಇಂಡಿಯನ್ ಮೆಡಿಕಲ್ ಅಸೋಸಿಯೇಶನ್) ಶ್ಲಾಘಿಸಿದೆ.
ಕೋವಿಡ್ -19 ವಿರುದ್ಧ ಭಾರತದ ಹೋರಾಟಕ್ಕೆ ಕೇಂದ್ರ ಸರ್ಕಾರದ ಈ ನಿರ್ಧಾರ ಸಹಾಯ ಮಾಡಲಿದೆ ಎಂದು ಐಎಮ್ಎ ಹೇಳಿದೆ.
ಇದನ್ನೂ ಓದಿ : ಕೋವಿಡ್ ವಾಸಿಯಾದವರಲ್ಲಿ ಚರ್ಮರೋಗ : ದೆಹಲಿ, ಮುಂಬೈ ನಗರಗಳಲ್ಲಿ ಕಾಣಿಸಿಕೊಂಡ ಹೊಸ ಸಮಸ್ಯೆ
ಇಂದು(ಸೋಮವಾರ, ಜೂನ್ 7) ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದಿದ್ದರು.
“ದೇಶದ ಯಾವ ರಾಜ್ಯ ಸರ್ಕಾರವು ಲಸಿಕೆಗಳಿಗಾಗಿ ಖರ್ಚು ಮಾಡಬೇಕಾಗಿಲ್ಲ. ಈ ಹಿಂದೆ 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರೂ ಉಚಿತ ಲಸಿಕೆಗಳನ್ನು ಪಡೆಯುತ್ತಿದ್ದರು. ಈಗ 18 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆಗಳನ್ನು ನೀಡಲಿದ್ದೇವೆ ಎಂದು ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವೈದ್ಯಕೀಯ ಮಂಡಳಿಯ ರಾಷ್ಟ್ರೀಯ ಅಧ್ಯಕ್ಷ ಡಾ. ಜೆ. ಜಯಲಾಲ್, ಸಾರ್ವತ್ರಿಕ ಲಸಿಕಾ ಅಭಿಯಾನವು ಭಾರತವು ಸಾಂಕ್ರಾಮಿಕ ಬಿಕ್ಕಟ್ಟಿನಿಂದ ಹೊರಬರಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಘೋಷಿಸಿದ ಈ ನಿರ್ಧಾರಕ್ಕೆ ಐಎಮ್ಎ ನಿರಂತರವಾಗಿ ಪ್ರೋತ್ಸಾಹ ನೀಡುತ್ತದೆ. ಇಂತಹ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕೆ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಈ ದಿಟ್ಟ ನಿರ್ಧಾರದಿಂದ ದೇಶ ಕೋವಿಡ್ ಸೋಂಕಿನ ಬಿಕ್ಕಟ್ಟಿನಿಂದ ಹೊರಬರಲು ಸಹಾಯವಾಗುತ್ತದೆ. ಕೋವಿಡ್ ಸೋಂಕನ್ನು ದೇಶದಿಂದ ಹೊರಕ್ಕೆ ಅಟ್ಟಲು ಸರ್ಕಾರದೊಂದಿಗೆ ಎಂದಿಗೂ ಐಎಮ್ಎ ಶ್ರಮಿಸಲಿದೆ ಎಂದಿದ್ದಾರೆ.
ಇನ್ನು, ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ವೈಯಕ್ತಿಕ ಟ್ವೀಟರ್ ಖಾತೆಯ ಮೂಲಕ ಪ್ರಶಂಸಿಸಿದ್ದಾರೆ.
प्रधानमंत्री श्री @narendramodi ने आज १८ वर्ष से ऊपर सभी देशवासियों को केंद्र सरकार द्वारा मुफ़्त वैक्सीन देने की घोषणा करके जनता को बड़ी राहत और कोरोना से लड़ने की एक नई ताक़त दी है। इस जन कल्याणकारी निर्णय के लिए मैं प्रधानमंत्रीजी का हार्दिक अभिनंदन करता हूँ।
— Rajnath Singh (@rajnathsingh) June 7, 2021
आदरणीय प्रधानमंत्री @narendramodi जी द्वारा समस्त देशवासियों के लिए मुफ़्त वैक्सीन उपलब्ध कराने के लिए हम उनका ह्रदय से आभार व्यक्त करते हैं। कोरोना के ख़िलाफ़ लड़ाई में मोदी जी की सरकार हर देशवासी के साथ खड़ी है। गरीब से गरीब व्यक्ति को मुफ़्त वैक्सीन लगे ये हमारा संकल्प है।
— Jagat Prakash Nadda (@JPNadda) June 7, 2021
आदरणीय प्रधानमंत्री जी के संवेदनशील नेतृत्व का ही सुफल है कि अब देश के किसी भी राज्य सरकार को कोविड वैक्सीन प्राप्ति हेतु कुछ भी खर्च नहीं करना पड़ेगा। सभी देशवासियों के लिए भारत सरकार निःशुल्क वैक्सीन उपलब्ध करवाएगी।
इस जनहितकारी निर्णय के लिए प्रधानमंत्री जी का हार्दिक आभार।
— Yogi Adityanath (@myogiadityanath) June 7, 2021
ಇದನ್ನೂ ಓದಿ : ಕೋವಿಡ್ ; ರಾಜ್ಯದಲ್ಲಿಂದು 27299 ಸೋಂಕಿತರು ಗುಣಮುಖ; 11958 ಹೊಸ ಪ್ರಕರಣ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.