ಬಂಗಾಳದಲ್ಲಿ ಸ್ಥಳೀಯ ಸಂಸ್ಥೆಗೂ ಬಿಜೆಪಿ ಲಗ್ಗೆ
Team Udayavani, Jun 5, 2019, 6:00 AM IST
ಕೋಲ್ಕತಾ: ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ 18ರಲ್ಲಿ ಬಿಜೆಪಿ ಗೆದ್ದಿತ್ತು. ಇದೀಗ ಆ ರಾಜ್ಯದಲ್ಲಿ ಮೊದಲ ಬಾರಿಗೆ ನಗರ ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಉತ್ತರ 24 ಪರಗಣ ಜಿಲ್ಲೆಗೆ ಸೇರಿದ ಭತ್ಪಾರಾ ಮುನಿಸಿಪಾಲಿಟಿಯಲ್ಲಿ ಬಿಜೆಪಿ ಈ ಸಾಧನೆ ಮಾಡಿದೆ. ಈ ಪ್ರದೇಶ ಕೊಲ್ಕತಾ ಮೆಟ್ರೋಪಾಲಿಟನ್ ಅಭಿವೃದ್ಧಿ ಪ್ರದೇಶದ ವ್ಯಾಪ್ತಿಯಲ್ಲಿಯೂ ಬರುತ್ತದೆ.
ಬಾರೆಕ್ಪುರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಸೋದರ ಸಂಬಂಧಿ ಸೌರವ್ ಸಿಂಗ್ ಮುನಿಸಿಪಾಲಿಟಿಯ ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ಮಂಗಳವಾರ ನಡೆದ ಮತದಾನ ದಲ್ಲಿ ಅವರಿಗೆ 26 ಮತಗಳು ಪ್ರಾಪ್ತವಾದವು. 2010ರಿಂದ ಏಪ್ರಿಲ್ವರೆಗೆ ಟಿಎಂಸಿ ವಶದಲ್ಲಿಯೇ ಅಧ್ಯಕ್ಷ ಸ್ಥಾನ ಇತ್ತು. ಮೇ 28ರಂದು ನಡೆದಿದ್ದ ಬೆಳವಣಿಗೆಯಲ್ಲಿ ಹಲಿಸಹರ್ ಮುನಿಸಿಪಾಲಿಟಿಯ 23 ಸದಸ್ಯರ ಪೈಕಿ 13, ನೈಹಾಟಿ ಮುನಿಸಿಪಾಲಿಟಿಯ 24 ಸದಸ್ಯರ ಪೈಕಿ 14 ಮಂದಿ ಬಿಜೆಪಿಗೆ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.