“ಕೈ” ಸೋಲಿಗೆ ಸೋನಿಯಾ, ಸಿಂಗ್ ಕಾರಣ…ಪ್ರಣಬ್ ಆತ್ಮಚರಿತ್ರೆಯಲ್ಲಿ ಮೋದಿ ಬಗ್ಗೆ ಹೇಳಿದ್ದೇನು?

ದಾದಾ ಅವರ “ದ ಪ್ರೆಸಿಡೆನ್ಶಿಯಲ್ ಇಯರ್ಸ್” ಆತ್ಮಚರಿತ್ರೆ ಜನವರಿಯಲ್ಲಿ ಬಿಡುಗಡೆ

Team Udayavani, Dec 12, 2020, 10:50 AM IST

“ಕೈ” ಸೋಲಿಗೆ ಸೋನಿಯಾ, ಸಿಂಗ್ ಕಾರಣ…ಪ್ರಣಬ್ ಆತ್ಮಚರಿತ್ರೆಯಲ್ಲಿ ಮೋದಿ ಬಗ್ಗೆ ಹೇಳಿದ್ದೇನು

ನವದೆಹಲಿ:ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸತತವಾಗಿ ಪರಾಜಯಗೊಳ್ಳುತ್ತಿದ್ದ ಸಂದರ್ಭದಲ್ಲಿ ಪಕ್ಷದೊಳಗೆ ನಾಯಕತ್ವದ ಬಗ್ಗೆ ಆಕ್ಷೇಪವ್ಯಕ್ತಪಡಿಸಿದ್ದರು. ಏತನ್ಮಧ್ಯೆ ಪ್ರಣಬ್ ಮುಖರ್ಜಿ ಅವರ “ದಿ ಪ್ರೆಸಿಡೆನ್ಸಿಯಲ್ ಇಯರ್ಸ್-2012-17” ಆತ್ಮಚರಿತ್ರೆಯ ಕೊನೆಯ ಸಂಪುಟದಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ವಿವರಿಸಲಾಗಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆಗಸ್ಟ್ ನಲ್ಲಿ ನಿಧನರಾಗಿದ್ದರು. ಅವರು ತಮ್ಮ ದೀರ್ಘಾವಧಿಯ ರಾಜಕೀಯ ಜೀವನ ಸೇರಿದಂತೆ ಕಾಂಗ್ರೆಸ್ ಪಕ್ಷದ ದುಸ್ಥಿತಿಯ ಕುರಿತು ಹಲವು ಒಳಸುಳಿವುಗಳನ್ನು ಪುಸ್ತಕದಲ್ಲಿ ದಾಖಲಿಸಿದ್ದಾರೆ.

2014ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಾರಣ ಎಂದು ಆರೋಪಿಸಿದ್ದಾರೆ.

ಒಂದು ವೇಳೆ 2004ರಲ್ಲಿ ನಾನೇನಾದರೂ ಪ್ರಧಾನಿಯಾಗಿದ್ದರೆ, 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನ್ನನುಭವಿಸುತ್ತಿರಲಿಲ್ಲ ಎಂದು ಕೆಲವು ಕಾಂಗ್ರೆಸ್ ಮುಖಂಡರು ನಂಬಿದ್ದರು.

ಇದನ್ನೂ ಓದಿ:ಬಾಂಜಾರು ಮಲೆಯಲ್ಲಿ ಮತಗಟ್ಟೆ ವೀಕ್ಷಣೆಗೆ ತೆರಳಿದ ಅಧಿಕಾರಿಗಳಿಗೆ ಎದುರಾದ ಒಂಟಿ ಸಲಗ

ಆದರೆ ಇದಕ್ಕೆ ನನ್ನ ಸಹಮತ ಇಲ್ಲವಾಗಿತ್ತಾದರೂ, ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದ ಮೇಲೆ ಪಕ್ಷದ ನಾಯಕತ್ವ ನಷ್ಟವಾಗಿದೆ ಎಂದು ಭಾವಿಸುತ್ತೇನೆ. ಪಕ್ಷದ ರಾಜಕೀಯ ವ್ಯವಹಾರಗಳನ್ನು ನಿಭಾಯಿಸುವಲ್ಲಿ ಸೋನಿಯಾ ಗಾಂಧಿ ಅಸಮರ್ಥರಾಗಿದ್ದರು. ಡಾ.ಮನಮೋಹನ್ ಸಿಂಗ್ ಅವರು ದೀರ್ಘಾವಧಿವರೆಗೆ ಸದನದಿಂದ ದೂರ ಉಳಿದಿದ್ದರು. ಇದರ ಪರಿಣಾಮ ಸಂಸದರೊಂದಿಗಿನ ವೈಯಕ್ತಿಕ ಸಂಪರ್ಕ ಕಡಿತಗೊಂಡಿತು ಎಂದು ಪ್ರಣಬ್ ತಮ್ಮ ಆತ್ಮಚರಿತ್ರೆಯಲ್ಲಿ ದಾಖಲಿಸಿದ್ದಾರೆ.

ರೂಪಾ ಪಬ್ಲಿಷರ್ಸ್ಸ್ ಪ್ರಣಬ್ ದಾದಾ ಅವರ “ದ ಪ್ರೆಸಿಡೆನ್ಶಿಯಲ್ ಇಯರ್ಸ್” ಆತ್ಮಚರಿತ್ರೆಯನ್ನು ಜನವರಿಯಲ್ಲಿ ಬಿಡುಗಡೆ ಮಾಡಲಿದ್ದು, ಕಾಂಗ್ರೆಸ್ ಸರ್ಕಾರವಿದ್ದಾಗ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದ ದಿನದಿಂದ ಹಿಡಿದು 2012ರಲ್ಲಿ ರಾಷ್ಟ್ರಪತಿಯಾಗುವವರೆಗೆ ಕಾಂಗ್ರೆಸ್ ಪಕ್ಷದ ಗೆಲುವು, ಸೋಲು, ದುಸ್ಥಿತಿ ಕುರಿತು ನಡೆಸಿರುವ ವಿಶ್ಲೇಷಣೆ ಪುಸ್ತಕದಲ್ಲಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಮಂಗಳೂರು ಬಸ್ ಸಂಚಾರದಲ್ಲಿ ವ್ಯತ್ಯಯ

ಡಾ.ಪ್ರಣಬ್ ಮುಖರ್ಜಿ ಅವರು ಮನಮೋಹನ್ ಸಿಂಗ್ ಹಾಗೂ ನರೇಂದ್ರ ಮೋದಿ ಸೇರಿದಂತೆ ಇಬ್ಬರು ಪ್ರಧಾನಿಗಳ ಜತೆಗೂ ಕಾರ್ಯನಿರ್ವಹಿಸಿದ್ದರು. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಮೈತ್ರಿಕೂಟವನ್ನು ರಕ್ಷಿಸಿಕೊಳ್ಳುವುದರಲ್ಲಿಯೇ ತಲ್ಲೀನರಾಗಿದ್ದರು. ಇದರಿಂದ ಸಮರ್ಥ ಆಡಳಿತ ನೀಡುವಲ್ಲಿ ಸಿಂಗ್ ವಿಫಲರಾದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಥಮ  ಅವಧಿಯಲ್ಲಿ ನಿರಂಕುಶ ಆಡಳಿತ ನಡೆಸಿದ್ದರು.

ಅವರ ನಿರಂಕುಶ ಆಡಳಿತದಿಂದ ಸರ್ಕಾರ, ಶಾಸಕಾಂಗ ಮತ್ತು ನ್ಯಾಯಾಂಗದ ನಡುವೆ ಕಡಿಮೆ ಸಂಬಂಧ ಹೊಂದಿದ್ದರಿಂದ ತಿಕ್ಕಾಟಕ್ಕೆ ಕಾರಣವಾಗಿತ್ತು. ಆದರೆ ಅವರ ಎರಡನೇ ಅವಧಿ ಉತ್ತಮ ಸಂಬಂಧದ ಮೂಲಕ ಆಡಳಿತ ಚುಕ್ಕಾಣಿ ಮುನ್ನಡೆಸಲಿದ್ದಾರೆಯೇ ಎಂಬುದಕ್ಕೆ ಕಾಲವೇ ಉತ್ತರ ಹೇಳಬೇಕು ಎಂದು ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.