1500 ಕಿ.ಮೀ ನಡೆದು ಬಂದಿದ್ದ ಪ್ರಧಾನಿ ಮೋದಿ ಅಭಿಮಾನಿಗೆ ‘ಕೈ” ಟಿಕೆಟ್
Team Udayavani, Mar 23, 2019, 1:27 PM IST
ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಲುವಾಗಿ ಸುಮಾರು 71 ದಿನಗಳ ಕಾಲ 1,500 ಕಿಲೋ ಮೀಟರ್ ಗೂ ಹೆಚ್ಚು ದೂರ ಕಾಲ್ನಡಿಗೆಯಲ್ಲಿಯೇ ಬಂದಿದ್ದ ಒಡಿಶಾದ ಯುವಕ ಮುಕ್ತಿಕಾಂತ್ ಬಿಸ್ವಾಲ್ (31ವರ್ಷ)ಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ.
ಕಳೆದ ವರ್ಷ ಒಡಿಶಾದ ಬಿಸ್ವಾಲ್ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು 1,500 ಕಿಲೋ ಮೀಟರ್ ಗಿಂತ ಹೆಚ್ಚು ದೂರ ನಡೆದುಕೊಂಡು ಬಂದಿದ್ದ. ರೂರ್ಕೆಲಾದಲ್ಲಿರುವ ಇಸ್ಪಾಟ್ ಜನರಲ್ ಆಸ್ಪತ್ರೆಯನ್ನು ಮೇಲ್ದಗೇರಿಸುತ್ತೇನೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆಯನ್ನು ಈಡೇರಿಸುವಂತೆ ಮನವಿ ಮಾಡಿಕೊಳ್ಳಲು ಬಂದಿದ್ದ.
ಏತನ್ನಧ್ಯೆ ಬಿಸ್ವಾಲ್ ದೆಹಲಿ ತಲುಪುವ ಮುನ್ನವೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಸಿದು ಬಿದ್ದ ಪರಿಣಾಮ ಆತನನ್ನು ಉತ್ತರಪ್ರದೇಶ ಆಗ್ರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊನೆಗೂ ಆತನಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲವಾಗಿತ್ತು.
ಇದೀಗ ಒಡಿಶಾ ರೂರ್ಕೆಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಹಾಗೂ 54 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.