Delhi University ; ವಿದ್ಯಾರ್ಥಿಗಳ ಜಗಳ: ಓರ್ವನ ಇರಿದು ಹತ್ಯೆ
ದೆಹಲಿಯಲ್ಲಿ ಒಂದೇ ದಿನದಲ್ಲಿ 3 ಕೊಲೆಗಳು
Team Udayavani, Jun 18, 2023, 10:49 PM IST
ಹೊಸದಿಲ್ಲಿ: ದೆಹಲಿ ವಿಶ್ವವಿದ್ಯಾನಿಲಯದ ಸೌತ್ ಕ್ಯಾಂಪಸ್‌ನಲ್ಲಿ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಇರಿದು ಹತ್ಯೆ ಮಾಡಲಾಗಿದೆ.
ಹತ್ಯೆ ಆರೋಪಿ ಮತ್ತು ಹತ್ಯೆಗೀಡಾದ ವಿದ್ಯಾರ್ಥಿ ನಿಖಿಲ್ ಚೌಹಾಣ್ ತಮ್ಮ ತರಗತಿಗಳಿಗೆ ಹಾಜರಾಗಲು ಕಾಲೇಜಿಗೆ ಬಂದಿದ್ದರು. ಇವರ ನಡುವೆ ಜಗಳ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯನ್ನು ಗುರುತಿಸಲಾಗಿದ್ದು, ಪತ್ತೆ ಹಚ್ಚಲಾಗುತ್ತಿದೆ. ಆರೋಪಿ ಇತರ ಮೂವರೊಂದಿಗೆ ಬಂದು ಕೃತ್ಯ ಎಸಗಿದ್ದಾನೆ.
ಇರಿದ ಬಳಿಕ ಮೋತಿ ಬಾಗ್‌ನ ಚರಕ್ ಪಾಲಿಕಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾನೆ ಎಂದು ಘೋಷಿಸಿದರು.
ನಿಖಿಲ್ ಗೆಳತಿಯೊಂದಿಗೆ ಆರೋಪಿ ಅನುಚಿತವಾಗಿ ವರ್ತಿಸಿದ್ದನೆಂದು ಆರೋಪಿಸಲಾಗಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ದೆಹಲಿಯಲ್ಲಿ ಒಂದೇ ದಿನದಲ್ಲಿ 3 ಕೊಲೆಗಳು
ನಿಖಿಲ್ ಹತ್ಯೆಯೊಂದಿಗೆ ನೈಋತ್ಯ ದೆಹಲಿ ಜಿಲ್ಲೆಯಲ್ಲಿ 24 ಗಂಟೆಯೊಳಗೆ ಒಟ್ಟು ಮೂರು ಕೊಲೆಗಳು ನಡೆದಿವೆ. ದೆಹಲಿಯ ಆರ್.ಕೆ. ಪುರಂ ಪ್ರದೇಶದಲ್ಲಿ ಇಬ್ಬರು ಸಹೋದರಿಯರನ್ನು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳಲ್ಲಿ ನಿಖಿಲ್ ಹತ್ಯೆ ನಡೆದಿದೆ.
ಭಾನುವಾರ ಮುಂಜಾನೆ ಆರ್‌ಕೆ ಪುರಂನಲ್ಲಿ ಇಬ್ಬರು ಮಹಿಳೆಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ ಇಬ್ಬರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ದಾಳಿಯ ಹಿಂದಿನ ಉದ್ದೇಶವು ಹಣಕಾಸು ವಿವಾದ ಅಥವಾ ಇತ್ಯರ್ಥ ಸಮಸ್ಯೆಗೆ ಸಂಬಂಧಿಸಿದೆ ಎಂದು ತೋರುತ್ತದೆ.
ದಾಳಿಕೋರರು ಪ್ರಾಥಮಿಕವಾಗಿ ಹತ್ಯೆಗೀಡಾದವರ ಸಹೋದರನನ್ನು ಗುರಿಯಾಗಿಸಿಕೊಂಡಿದ್ದರು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ, ಆದರೆ ದಾಳಿ ಸಮಯದಲ್ಲಿ ಆಕಸ್ಮಿಕವಾಗಿ ಮಹಿಳೆಯರ ಮೇಲೆ ಗುಂಡು ಹಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.