ಸೋಂಕಿನ ವಿರುದ್ಧ ಜನಾಂದೋಲನ ; ವಿಶ್ವಸಂಸ್ಥೆಯ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ


Team Udayavani, Jul 18, 2020, 6:40 AM IST

ಸೋಂಕಿನ ವಿರುದ್ಧ ಜನಾಂದೋಲನ ; ವಿಶ್ವಸಂಸ್ಥೆಯ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಹೊಸದಿಲ್ಲಿ: ‘ಕೋವಿಡ್ 19 ಸೋಂಕು ಜಗತ್ತಿನ ಎಲ್ಲ ದೇಶಗಳ ಸ್ಥಿತಿಸ್ಥಾಪಕತ್ವವನ್ನು ಪರೀಕ್ಷಿಸುತ್ತಿದೆ.

ಭಾರತದಲ್ಲಿ ನಾವು ಕೋವಿಡ್ 19 ವಿರುದ್ಧದ ಹೋರಾಟವನ್ನು ಜನಾಂದೋಲನವಾಗಿ ರೂಪಿಸಲು ಪ್ರಯತ್ನಿಸಿದ್ದೇವೆ.

ಸರಕಾರ ಮತ್ತು ನಾಗರಿಕ ಸಮಾಜವು ಜತೆಯಾಗಿ ಈ ಸೋಂಕಿನ ವಿರುದ್ಧ ಹೋರಾಡುತ್ತಿದೆ.’

ಇದು ಕೋವಿಡ್ 19 ಸೋಂಕಿನ ವಿರುದ್ಧದ ಭಾರತದ ಸಮರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಆಡಿರುವ ಮಾತುಗಳು.

ಶುಕ್ರವಾರ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ (ಇಕೋಸೋಕ್‌) ಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, ವಿಶ್ವಸಂಸ್ಥೆಯಲ್ಲಿನ ಸುಧಾರಣೆ, ಬಹುಪಕ್ಷೀಯತೆ, ಕೋವಿಡ್ 19 ಸೋಂಕು, ಅಭಿವೃದ್ಧಿ ನಿಟ್ಟಿನಲ್ಲಿ ದೇಶ ಇಟ್ಟಿರುವ ಹೆಜ್ಜೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಪ್ರಸ್ತಾಪಿಸಿದ್ದಾರೆ.

ವಿಶ್ವಸಂಸ್ಥೆಯ ಬಲಿಷ್ಠ ಭದ್ರತಾ ಮಂಡಳಿಯಲ್ಲಿ ಭಾರತವು ತಾತ್ಕಾಲಿಕ ಸದಸ್ಯತ್ವವನ್ನು ಪಡೆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರು ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಕೋವಿಡ್ 19 ವಿರುದ್ಧದ ಜಂಟಿ ಹೋರಾಟದಲ್ಲಿ ನಾವು ಸುಮಾರು 150 ದೇಶಗಳಿಗೆ ವೈದ್ಯಕೀಯ ಹಾಗೂ ಇತರೆ ನೆರವು ನೀಡಿದ್ದೇವೆ. ನಾವು ಭಾರತದಲ್ಲಿ ಈ ಸೋಂಕಿನ ವಿರುದ್ಧದ ಹೋರಾಟವನ್ನು ಜನಾಂದೋಲನವಾಗಿ ರೂಪಿಸಿದ್ದೇವೆ. ಅಲ್ಲದೆ, ಜಗತ್ತಿನಲ್ಲೇ ಅತ್ಯುತ್ತಮ ಗುಣಮುಖ ಪ್ರಮಾಣವನ್ನೂ ನಾವು ಹೊಂದಿದ್ದೇವೆ ಎಂದಿದ್ದಾರೆ ಮೋದಿ.

ಭಾರತದ ಕ್ಷಿಪ್ರ ಸ್ಪಂದನೆ: ಇಂದು ವಿಶ್ವಸಂಸ್ಥೆಯು 193 ಸದಸ್ಯ ರಾಷ್ಟ್ರಗಳನ್ನು ಒಂದೇ ಸೂರಿನಡಿ ತಂದಿದೆ. ಇದರ ಸದಸ್ಯತ್ವದೊಂದಿಗೆ ಸಂಸ್ಥೆಯ ಮೇಲಿನ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ. ಭೂಕಂಪವಾಗಲೀ, ಚಂಡಮಾರುತವಾಗಲೀ, ಎಬೊಲಾವಾಗಲೀ, ಯಾವುದೇ ಪ್ರಾಕೃತಿಕ ಅಥವಾ ಮಾನವ ನಿರ್ಮಿತ ಸಂಕಷ್ಟ‌ ಎದು ರಾದಾಗಲೂ ಭಾರತವು ಅತ್ಯಂತ ಕ್ಷಿಪ್ರವಾಗಿ ಸ್ಪಂದಿಸಿದೆ. ಆರಂಭದಿಂದಲೂ ಭಾರತವು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಗಳು ಹಾಗೂ ಇಕೋಸೋಕ್‌ಗೆ ಸಕ್ರಿಯ ಬೆಂಬಲ ನೀಡುತ್ತಾ ಬಂದಿದೆ.

ಇಕೋಸೋಕ್‌ನ ಮೊದಲ ಅಧ್ಯಕ್ಷರು ಕೂಡ ಭಾರತದವರೇ ಆಗಿದ್ದರು. ಅಲ್ಲದೆ, ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ ಅಜೆಂಡಾ ರೂಪಿಸುವಲ್ಲೂ ಭಾರತ ತನ್ನದೇ ಆದ ಕೊಡುಗೆ ನೀಡಿದೆ. 2030ರ ಅಜೆಂಡಾ ಹಾಗೂ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವತ್ತ ನಾವು ಶ್ರಮಿಸುತ್ತಿದ್ದೇವೆ. ಜತೆಗೆ ಅಭಿವೃದ್ಧಿ ಹೊಂದು ತ್ತಿರುವ ಇತರೆ ದೇಶಗಳೂ ಸುಸ್ಥಿರ ಅಭಿವೃದ್ಧಿಯ ಉದ್ದೇಶ ಸಾಧಿಸಲು ನಾವು ನೆರವು ನೀಡುತ್ತಿದ್ದೇವೆ ಎಂದೂ ಮೋದಿ ಹೇಳಿದ್ದಾರೆ.

ವಿಕಾಸದತ್ತ ಭಾರತ: ಸಬ್‌ಕಾ ಸಾಥ್‌, ಸಬ್‌ಕಾ ವಿಕಾಸ್‌ ಎನ್ನುವುದೇ ನಮ್ಮ ಧ್ಯೇಯ. ಅಂದರೆ, ಎಲ್ಲರನ್ನೂ ಒಂದುಗೂಡಿಸಿಕೊಂಡು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಸಾಧಿಸುವುದರ ಕಡೆಗೆ ನಮ್ಮ ಗಮನ ನೆಟ್ಟಿದ್ದೇವೆ. ಕಳೆದ ವರ್ಷ ನಾವು 6 ಲಕ್ಷದಷ್ಟು ಗ್ರಾಮಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮದಿನವನ್ನು ಆಚರಿಸಿದ್ದೇವೆ. ಆರ್ಥಿಕ ಒಳಗೊಳ್ಳುವಿಕೆಗಾಗಿ ತಂತ್ರಜ್ಞಾನದ ಬಲವನ್ನು ಬಳಸಿಕೊಂಡಿದ್ದೇವೆ.

ವಿಶಿಷ್ಟ ಗುರುತಿನ ಸಂಖ್ಯೆ, ಬ್ಯಾಂಕ್‌ ಖಾತೆ ಮತ್ತು ಎಲ್ಲರಿಗೂ ಮೊಬೈಲ್‌ ಸಂಪರ್ಕ ಎಂಬ ತ್ರಿಕೂಟಗಳನ್ನು ಆಧರಿಸಿ ಆರ್ಥಿಕ ಒಳಗೊಳ್ಳುವಿಕೆಯನ್ನು ಸಾಧಿಸುತ್ತಿದ್ದೇವೆ. ಎಲ್ಲರಿಗೂ ಮನೆ ಎಂಬ ಯೋಜನೆಯನ್ನು ಹಾಕಿಕೊಂಡು, 2022ರೊಳಗಾಗಿ ಪ್ರತಿಯೊಬ್ಬ ಭಾರತೀಯನಿಗೂ ಸುರಕ್ಷಿತ ಮತ್ತು ಭದ್ರ ಸೂರು ಕಲ್ಪಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದೇವೆ. ಭಾರತವು ಸ್ವಾತಂತ್ರ್ಯ ಪಡೆದು 75 ವರ್ಷ ಪೂರ್ಣಗೊಳ್ಳುವ ವೇಳೆಗೆ ಇದು ಸಾಕಾರಗೊಳ್ಳಲಿದೆ. 2025ರೊಳಗೆ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಹಾದಿಯಲ್ಲಿಯೂ ನಾವಿದ್ದೇವೆ ಎಂದು ವಿವರಿಸಿದ್ದಾರೆ ಮೋದಿ.

ಕಳೆದ ಕೆಲವು ವರ್ಷಗಳಲ್ಲಿ ನಾವು ವಾರ್ಷಿಕ 38 ದಶಲಕ್ಷ ಟನ್‌ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಿದ್ದೇವೆ. ಅಲ್ಲದೆ ಭಾರತವು ಬೃಹತ್‌ ಸ್ವಚ್ಛತಾ ಆಂದೋಲನ ಕೈಗೊಂಡಿದ್ದು, ಏಕಬಳಕೆಯ ಪ್ಲಾಸ್ಟಿಕ್‌ ಬಳಕೆಯನ್ನು ತಗ್ಗಿಸುವ ನಿಟ್ಟಿನಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದೂ ಹೇಳಿದ್ದಾರೆ.

ವಿಶ್ವಸಂಸ್ಥೆಯ ಸುಧಾರಣೆಯ ಸಂದೇಶ
ವಿಶ್ವಸಂಸ್ಥೆಯು ಹುಟ್ಟಿಕೊಂಡಿದ್ದೇ ಎರಡನೇ ವಿಶ್ವಯುದ್ಧದ ಆವೇಶ‌ದ ಫ‌ಲವಾಗಿ. ಈಗ ಕೋವಿಡ್ 19 ಸೋಂಕು ಎಂಬ ಆವೇಶವು ವಿಶ್ವಸಂಸ್ಥೆಯ ಮರುಹುಟ್ಟು ಹಾಗೂ ಸುಧಾರಣೆಗೆ ನಾಂದಿ ಹಾಡಲಿದೆ ಎಂದು ಮೋದಿ ಹೇಳಿದ್ದಾರೆ.

ಜತೆಗೆ, ಜಾಗತಿಕ ಸಾಮರಸ್ಯ, ಸಾಮಾಜಿಕ-ಆರ್ಥಿಕ ಸಮಾನತೆ, ನಿಸರ್ಗದ ಸಮತೋಲನದ ಸಂರಕ್ಷಣೆಯಂಥ ಬದ್ಧತೆಯ ಮೂಲಕ ಭಾರತವು, ವಿಶ್ವಸಂಸ್ಥೆಯ ಅಜೆಂಡಾಗೆ ಸಂಪೂರ್ಣ ಬೆಂಬಲ ನೀಡಲಿದೆ. ನಾವೆಲ್ಲರೂ ಜಾಗತಿಕ ಬಹುಪಕ್ಷೀಯತೆಯ ಪರಿಕಲ್ಪನೆಯನ್ನು ಸುಧಾರಿಸುವುದಾಗಿ ಶಪಥ ಮಾಡಬೇಕಿದೆ. ಸುಧಾರಿತ ವಿಶ್ವಸಂಸ್ಥೆಯೊಂದಿಗೆ ಸುಧಾರಿತ ಬಹುಪಕ್ಷೀಯತೆ ಸೇರಿಕೊಂಡರಷ್ಟೇ ಮಾನವತೆಯ ಬಯಕೆಗಳು ಈಡೇರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.