ಪಕ್ಷಾಂತರ ವಿರುದ್ಧ ಕೆಂಡ: ಪ್ರತೀ ಶಾಸಕನಿಗೂ 40-50 ಕೋಟಿ ರೂ.ಗಳ ಆಮಿಷವೊಡ್ಡಲಾಗಿದೆ
Team Udayavani, Sep 16, 2022, 7:25 AM IST
ಪಣಜಿ/ರಾಂಚಿ: ಗೋವಾದಲ್ಲಿ 11 ಕಾಂಗ್ರೆಸ್ ಶಾಸಕರ ಪೈಕಿ 8 ಮಂದಿ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ತೀವ್ರ ವಾಕ್ಸಮರ ಆರಂಭವಾಗಿದೆ.
ಪ್ರತೀ ಶಾಸಕನಿಗೂ 40-50 ಕೋಟಿ ರೂ.ಗಳ ಆಮಿಷವೊಡ್ಡಲಾಗಿದೆ ಎಂದು ಕಾಂಗ್ರೆಸ್ ನಾಯಕ, ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಆರೋಪಿಸಿದ್ದಾರೆ. ಇದನ್ನು ಬಿಜೆಪಿ ತಳ್ಳಿಹಾಕಿದೆ.
ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಗುರುವಾರ ಗೋವಾಗೆ ಧಾವಿಸಿದ್ದ ದಿನೇಶ್ ಗುಂಡೂರಾವ್ ಪಕ್ಷದ ಶಾಸಕರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. “ಇಷ್ಟೆಲ್ಲ ಹಣ ಕೊಟ್ಟು ಶಾಸಕರನ್ನು ಖರೀದಿಸುತ್ತಿರುವ ಬಿಜೆಪಿಗೆ ಈ ಹಣ ಎಲ್ಲಿಂದ ಬರುತ್ತದೆ? ಅವರು ಅಧಿಕಾರ ದುರ್ಬಳಕೆ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಗೋವಾ ಘಟಕದ ಅಧ್ಯಕ್ಷ ಸದಾನಂದ ಶೇಟ್ ಮಾತನಾಡಿ, “ಕಾಂಗ್ರೆಸ್ ನಿರ್ನಾಮವಾಗುತ್ತಿದೆ ಎಂಬುದನ್ನು ಅರಿತು, ಯಾವುದೇ ಷರತ್ತು ಇಲ್ಲದೆಯೇ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ ಎಂದಿದ್ದಾರೆ.
ಎರಡು ರೀತಿಯ ಜನರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ಒಂದು, ಪಕ್ಷದಲ್ಲಿ ಹುದ್ದೆ, ಅಧಿಕಾರ ಎಲ್ಲ ವನ್ನೂ ಗಳಿಸಿದವರು. ಉದಾ: ಗುಲಾಂ ನಬಿ ಆಜಾದ್‌ರಂಥವರು. ಎರಡನೆ ಯದ್ದು, ತನಿಖಾ ಸಂಸ್ಥೆಗಳ ಹಿಡಿತಕ್ಕೆ ಸಿಲುಕಿದವರು. ಉದಾ: ಹಿಮಾಂತ ಬಿಸ್ವಾ ಶರ್ಮಾ. ಬಿಜೆಪಿ ಸೇರಿದೊಡನೆ ಎಲ್ಲ ಆರೋಪಗಳಿಂದಲೂ ಅವರು ಮುಕ್ತರಾದರು. -ಜೈರಾಂ ರಮೇಶ್, ಕಾಂಗ್ರೆಸ್ ಹಿರಿಯ ನಾಯಕ
ಮೋದಿಜೀ ಅವರನ್ನು ಹೊರತುಪಡಿಸಿ ಬೇರ್ಯಾರಿಗೂ ಈ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಅರಿತು ಕಾಂಗ್ರೆಸ್ ಶಾಸಕರೆಲ್ಲ ಬಿಜೆಪಿಗೆ ಸೇರುತ್ತಿದ್ದಾರೆ. ನಾವು ಯಾವ ಶಾಸಕನನ್ನೂ ಸಂಪರ್ಕಿಸಿ, ಪಕ್ಷಕ್ಕೆ ಬನ್ನಿ ಎಂದು ಕರೆದಿಲ್ಲ. ಅವರೇ ಸ್ವಇಚ್ಛೆಯಿಂದ ಬಂದಿದ್ದಾರೆ.-ಪ್ರಮೋದ್ ಸಾವಂತ್, ಗೋವಾ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.