ಮಹಾರಾಷ್ಟ್ರ ಸಿಎಂ ಇಲ್ಲದೇ ಪ್ರಮಾಣವಚನ ಸ್ವೀಕರಿಸಿದ ಶಾಸಕರು…ಯಾಕೆ? ಸಂಪ್ರದಾಯ ಹೇಗೆ
Team Udayavani, Nov 27, 2019, 11:43 AM IST
ಮುಂಬೈ: ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯಾಗದೆ, ಮುಖ್ಯಮಂತ್ರಿ ನೇಮಕವಾಗದೆ 14ನೇ ಮಹಾರಾಷ್ಟ್ರ ವಿಧಾನಸಭೆಯು ಅಪರೂಪದ ಅಧಿವೇಶನಕ್ಕೆ ಸಾಕ್ಷಿಯಾಗಿದ್ದು, ಬುಧವಾರ ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರ ವಿಧಾನ ಭವನದ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಪಿಟಿಐಗೆ ನೀಡಿರುವ ಮಾಹಿತಿ ಪ್ರಕಾರ, ಕಳೆದ ಎರಡು ದಶಕಗಳ ಅವಧಿಯಲ್ಲಿ ಸಂಪ್ರದಾಯದಂತೆ ಮೊದಲು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿ ನಂತರ ಉಳಿದ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದರು.
ನಂತರ ಕೂಡಲೇ ವಿಶ್ವಾಸಮತ ಯಾಚನೆ ನಡೆಯುತ್ತಿತ್ತು. ಆದರೆ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿಲ್ಲ. ಆದರೆ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ ಎಂದು ಹೇಳಿದರು.
ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಕಡ್ಡಾಯ ಎಂದು ತಿಳಿಸಿತ್ತು. ಒಂದು ಬಾರಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ ನಂತರ ವಿಧಾನಸಭೆ ಮುಖ್ಯಸ್ಥರು ಹಾಗೂ ಸಂಪುಟದಲ್ಲಿ ಗೊತ್ತುವಳಿ ಸ್ವೀಕರಿಸಲು ಆಗಲ್ಲ ಎಂದು ವಿವರಿಸಿದ್ದಾರೆ.
ಅಲ್ಲದೇ ಒಂದು ಬಾರಿ ಮುಖ್ಯಮಂತ್ರಿಯಾದವರು ಪ್ರಮಾಣವಚನ ಸ್ವೀಕರಿಸಿದ ನಂತರ ಸಂಪುಟ ರಚನೆ ಮಾಡುತ್ತಾರೆ. ತದನಂತರ ಪೂರ್ಣಾವಧಿಯ ಅಧಿವೇಶನ ಕರೆಯಲು ಮೊದಲ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. ಅದೇ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.
ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಬುಧವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಿದ್ದು, ಸದನದಲ್ಲಿ 288 ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೋಳಂಬ್ಕರ್ ಪ್ರತಿಜ್ಞಾವಿಧಿ ಬೋಧಿಸಿದ್ದರು. ಅಜಿತ್ ಪವಾರ್, ಚಗನ್ ಭುಜ್ ಬಲ್, ಅಶೋಕ್ ಚವಾಣ್ ಮತ್ತು ಪ್ರಥ್ವಿರಾಜ್ ಚವಾಣ್ ಸೇರಿದಂತೆ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರು.
ಮಹಾರಾಷ್ಟ್ರದಲ್ಲಿನ ನಾಟಕೀಯ ರಾಜಕೀಯ ಬೆಳವಣಿಗೆಯಿಂದಾಗಿ ಚುನಾವಣಾ ಫಲಿತಾಂಶ ಘೋಷಣೆಯಾದ ಒಂದು ತಿಂಗಳವರೆಗೂ ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣವಚನ ಸ್ವೀಕರಿಸಿರಲಿಲ್ಲವಾಗಿತ್ತು. ಅಲ್ಲದೇ ಯಾವುದೇ ಪಕ್ಷಗಳು ಸರ್ಕಾರ ರಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ನವೆಂಬರ್ 12ರಿಂದ 23ರವರೆಗೆ ರಾಷ್ಟ್ರಪತಿ ಆಡಳಿತ ಜಾರಿಯಾಗಿತ್ತು.
ಎನ್ ಸಿಪಿ ಮುಖಂಡ ಅಜಿತ್ ಪವಾರ್ ಬೆಂಬಲದೊಂದಿಗೆ ನ.23ರಂದು ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮಂಗಳವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಿಂದ ಸರ್ಕಾರ ಪತನವಾಗಿತ್ತು.
ಸೋಮವಾರ ರಾಜ್ಯಪಾಲರನ್ನು ಭೇಟಿಯಾಗಿದ್ದ ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ 162 ಶಾಸಕರ ಬೆಂಬಲ ಇರುವ ಬಗ್ಗೆ ಶಾಸಕರ ಸಹಿಯುಳ್ಳ ಪತ್ರವನ್ನು ನೀಡಿತ್ತು. ಅಲ್ಲದೇ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂದು ಎನ್ ಸಿಪಿ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.