ತವರಲ್ಲಿ ನಮೋಗೆ ಸಲಾಂ, ಗುಜರಾತ್‌, ಹಿಮಾಚಲದಲ್ಲಿ ಕಮಲದ್ದೇ ಕಲರವ

Team Udayavani, Dec 15, 2017, 6:05 AM IST

lead-1.jpg

ಅಹ್ಮದಾಬಾದ್‌/ಹೊಸದಿಲ್ಲಿ: ದೇಶಾದ್ಯಂತ ಭಾರೀ ಕುತೂಹಲಕ್ಕೆಡೆ ಮಾಡಿದ್ದ ಗುಜರಾತ್‌, ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾಗೆ ಭರ್ಜರಿ ಸಿಹಿ ಸಿಗಲಿದೆ ಎಂದು ಮತಗಟ್ಟೆ ಸಮೀಕ್ಷೆ ಭವಿಷ್ಯ ನುಡಿದಿವೆ. 

ಗುರುವಾರ ಗುಜರಾತ್‌ನಲ್ಲಿ ನಡೆದ ಕಡೇ ಹಂತದ ಮತ ದಾನದ ಬಳಿಕ ದೇಶದ ನಾನಾ ಆಂಗ್ಲ ವಾಹಿನಿಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ. ಹೆಚ್ಚು ಕಡಿಮೆ ಈ ಎಲ್ಲ ವಾಹಿನಿಗಳೂ ಬಿಜೆಪಿಗೆ ಗೆಲುವಿನ ಸಿಹಿ ಎಂದು ಸಾರಿವೆ. 

ಕಡೇ ಹಂತದಲ್ಲಿ ಶೇ.68.7ರಷ್ಟು ಮತದಾನವಾಗಿದೆ. ಕೆಲವು ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಶಾಂತ ರೀತಿಯಲ್ಲೇ ಮತದಾನ ನಡೆದಿದೆ. 

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಅಮಿತ್‌ ಶಾ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಕಣ ವಾಗಿತ್ತು. ಪಾಟೀದಾರ್‌ ಪ್ರತಿ ಭಟನೆ ಮೂಲಕ ಬಿಜೆಪಿಯ ಪ್ರಬಲ ವೋಟ್‌ಬ್ಯಾಂಕ್‌ ಎಂದೇ ಬಿಂಬಿತವಾಗಿದ್ದ ಪಟೇಲರು ಬಿಜೆಪಿಯಿಂದ ದೂರ ಸರಿದಿದ್ದರು ಎನ್ನಲಾಗಿತ್ತು. ಅಲ್ಲದೆ ಠಾಕೂರ್‌ ಸಮುದಾಯದ ಅಲ್ಪೇಶ್‌ ಠಾಕೂರ್‌, ದಲಿತ ಸಮುದಾಯದ ಜಿಗ್ನೇಶ್‌ ಮೆವಾನಿ ಅವರ ಸಂಘಟನೆ ಮತ್ತು ಹೋರಾಟದಿಂದಾಗಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಈ ಯಾವ ವಿಚಾರಗಳೂ ಬಿಜೆಪಿ ಗೆಲುವಿಗೆ ಅಡ್ಡಿಯಾಗಿಲ್ಲ ಎಂದು ಈ ಸಮೀಕ್ಷೆ ಹೇಳಿವೆ. ಅಲ್ಲದೆ ಸರಕಾರ ರಚಿಸಲು ಬೇಕಾದ 92 ಸ್ಥಾನಗಳನ್ನು ಯಾವುದೇ ಅಡ್ಡಿ ಇಲ್ಲದೇ ಬಿಜೆಪಿ ಪಡೆದುಕೊಳ್ಳಲಿದೆ ಎಂದೂ ವಿಶ್ಲೇಷಿಸಿವೆ.

182 ಸ್ಥಾನಗಳ ಬಲವುಳ್ಳ ಗುಜರಾತ್‌ನಲ್ಲಿ ಬಿಜೆಪಿ 108ರಿಂದ 135 ಮತ್ತು ಕಾಂಗ್ರೆಸ್‌ 47ರಿಂದ 74 ಸ್ಥಾನಗಳವರೆಗೆ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿವೆ. ಕೆಲವು ದಿನಗಳ ಹಿಂದಷ್ಟೆ ಮತದಾನಪೂರ್ವ ಸಮೀಕ್ಷೆ ನಡೆಸಿದ್ದ ಸಿಎಸ್‌ಡಿಎಸ್‌, ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಸಮಬಲದ ಹೋರಾಟ ನಡೆಯಲಿದೆ ಎಂದು ಹೇಳಿತ್ತು. ಆದರೆ ಈಗ ಇದೇ ವಾಹಿನಿ ಬಿಜೆಪಿಗೆ ನಿಚ್ಚಳ ಬಹುಮತ ದೊರೆಯಲಿದೆ ಎಂದು ಹೇಳಿದೆ. 

ಹಿಮಾಚಲವೂ ಕಮಲದ ತೆಕ್ಕೆಗೆ
ಚುನಾವಣೆ ನಡೆದ ಮತ್ತೂಂದು ರಾಜ್ಯವಾದ ಹಿಮಾಚಲ ಪ್ರದೇಶ ದಲ್ಲೂ ಬಿಜೆಪಿಗೇ ಗೆಲುವು ಎಂದು ಈ ಸಮೀಕ್ಷೆ 
ನುಡಿದಿದೆ. ಈ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಕೆಲಸ ಮಾಡಲಿದೆ ಎಂದು ಹೇಳಿದೆ. ಅಂದರೆ ಟುಡೇಸ್‌ ಚಾಣಕ್ಯ ಪ್ರಕಾರ 68 ಸ್ಥಾನಗಳ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 55ರಲ್ಲಿ ಮತ್ತು ಕಾಂಗ್ರೆಸ್‌ 13ರಲ್ಲಿ ಗೆಲ್ಲಲಿದೆ ಎಂದಿದೆ. ಇನ್ನು ಟೈಮ್ಸ್‌ನೌ ಪ್ರಕಾರ ಬಿಜೆಪಿ 51 ಮತ್ತು ಕಾಂಗ್ರೆಸ್‌ 17, ಇಂಡಿಯಾ ಟುಡೆ ಪ್ರಕಾರ ಬಿಜೆಪಿ 50, ಕಾಂಗ್ರೆಸ್‌ 18 ಸ್ಥಾನಗಳಲ್ಲಿ ಜಯ ಗಳಿಸಲಿದೆ. 

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.