30 ವರ್ಷ ಹಿಂದಿನ ಪ್ರಕರಣದಲ್ಲಿ ಸಚಿವ ಸಿಧುಗೆ 1 ಸಾವಿರ ರೂ.ದಂಡ
Team Udayavani, May 16, 2018, 6:00 AM IST
ನವದೆಹಲಿ: ಮೂವತ್ತು ವರ್ಷಗಳ ಹಿಂದಿನ ರಸ್ತೆ ಅಪಘಾತ ಪ್ರಕರಣದಲ್ಲಿ ಪಂಜಾಬ್ ಸಚಿವ ನವಜೋತ್ ಸಿಂಗ್
ಸಿಧು ಅವರನ್ನು ದೋಷಿ ಎಂದು ಸುಪ್ರೀಂಕೋರ್ಟ್ ಘೋಷಿಸಿದೆ.
ಅವರಿಗೆ 1 ಸಾವಿರ ರೂ. ದಂಡ ವಿಧಿಸಿದೆ. ನ್ಯಾ.ಜೆ.ಚಲಮೇಶ್ವರ್ ಮತ್ತು ನ್ಯಾ.ಸಂಜಯ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠ ಇದೇ ಪ್ರಕರಣದಲ್ಲಿ ಸಿಧು ಅವರಿಗೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ್ಯಾಯಪೀಠ ನೀಡಿದ್ದ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ರದ್ದು ಮಾಡಿದೆ. ಇದರ ಜತೆಗೆ 1988ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧು ಅವರ ನಿಕಟವರ್ತಿ ರೂಪಿಂದರ್ ಸಿಂಗ್ ಸಂಧು ಎಂಬುವರನ್ನು ದೋಷಮುಕ್ತಿಗೊಳಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನವಜೋತ್ ಸಿಂಗ್ ಸಿಧು ಪ್ರತಿ ಸಂದರ್ಭದಲ್ಲಿಯೂ ತಾವು ಕಷ್ಟದಲ್ಲಿದ್ದಾಗ ನಂಬಿದ ದೇವರು ಕಾಪಾಡಿದ್ದಾರೆ. ಇದರ ಜತೆಗೆ ತಮಗೆ ಬೆಂಬಲ ನೀಡಿದವರಿಗೂ ಕೃತಜ್ಞತೆ ಸೂಚಿಸುವುದಾಗಿ ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.