ನಾಪತ್ತೆ ಪ್ರಕರಣಕ್ಕೆ: ಪಾಕ್ ಗುಪ್ತಚರ ಇಲಾಖೆ ವಶದಲ್ಲಿ ಮೌಲ್ವಿಗಳು?
Team Udayavani, Mar 19, 2017, 3:50 AM IST
ಹೊಸದಿಲ್ಲಿ: ದಿಲ್ಲಿಯ ಹಜ್ರತ್ ನಿಜಾಮುದ್ದೀನ್ ದರ್ಗಾದ ಇಬ್ಬರು ಮೌಲ್ವಿಗಳ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅವರನ್ನು ಪಾಕಿಸ್ಥಾನದ ಗುಪ್ತಚರ ಇಲಾಖೆ ವಶಕ್ಕೆ ತೆಗೆದುಕೊಂಡಿರುವ ವಿಚಾರ ಈಗ ಗೊತ್ತಾಗಿದೆ.
ಮುತ್ತಹಿದಾ ಖ್ವಾಮಿ ಮೂವ್‌ಮೆಂಟ್ (ಎಂಕ್ಯುಎಂ) ಜತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಪಾಕ್ ಗುಪ್ತಚರ ಇಲಾಖೆ
ಇವರನ್ನು ವಶಕ್ಕೆ ಪಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮೌಲ್ವಿಗಳಾಗಿರುವ ಸಯೀದ್ ಆಸಿಫ್ ನಿಜಾಮ್ ಮತ್ತು ಆತನ ಸೋದರಳಿಯ ನಜೀಮ್ ನಿಜಾಮ್ ಮಾ. 14ರಂದು ಲಾಹೋರ್‌ನ ಅಲ್ಲಾಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾಣೆ ಯಾಗಿದ್ದರು. ವಿಮಾನ ನಿಲ್ದಾಣದಲ್ಲೇ ಈ ಇಬ್ಬರನ್ನೂ ವಶಕ್ಕೆ ಪಡೆದ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಜ್ಞಾತ ಸ್ಥಳವೊಂದಕ್ಕೆ ಕರೆದೊಯ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಇಬ್ಬರೂ ಎಂಕ್ಯುಎಂನ ಅಲ್ತಾಫ್ ಹುಸೈನ್‌ನ ಸಹಚರನ ಜತೆ ನಂಟು ಹೊಂದಿರುವ ಶಂಕೆಯಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಇವರ ಮೇಲಿನ ಆರೋಪ ಸಾಬೀತಾಗದಿದ್ದರೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.